ಕಾಂಗ್ರೆಸ್ಸಿನಲ್ಲಿ ಭಿನ್ನಾಭಿಪ್ರಾಯವಿಲ್ಲ, ನಾವು ಒಗ್ಗಟ್ಟಿನಲ್ಲಿ ಇದ್ದೇವೆ: ಬಸವರಾಜ ರಾಯರೆಡ್ಡಿ

Published : Oct 07, 2025, 10:41 AM IST
Basvaraj Rayareddi

ಸಾರಾಂಶ

ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಗ್ಗಟ್ಟಿನಿಂದಲೇ ಇದ್ದೇವೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳ (ಅ.07): ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಗ್ಗಟ್ಟಿನಿಂದಲೇ ಇದ್ದೇವೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿಯೇ ಭಾಷಣ ಆರಂಭಿಸಿದ ರಾಯರಡ್ಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿಗದಿಯಂತೆ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ಆನಾರೋಗ್ಯದಿಂದ ಬಂದಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಿ, ಭಿನ್ನಾಭಿಪ್ರಾಯ ಎಂದೆಲ್ಲ ಬರೆಯಬೇಡಿ, ನಾವೆಲ್ಲ ಒಗ್ಗಟ್ಟಿನಿಂದಲೇ ಇದ್ದೇವೆ ಎಂದರು.

ಅನೇಕರು ಗೈರು: ಕೊಪ್ಪಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಅನೇಕರು ಗೈರು ಹಾಜರಾಗಿರುವುದು ಹಲವು ಚರ್ಚೆಯನ್ನು ಹುಟ್ಟು ಹಾಕುವಂತೆ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಗಮಿಸಿರಲಿಲ್ಲ. ಆದರೆ, ಅವರು ಬರುವುದಿಲ್ಲ ಎನ್ನುವುದನ್ನು ಒಂದು ದಿನ ಮೊದಲೇ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದ್ದರು. ಕೋರ್ಟ್ ಕೆಲಸ ಇರುವುದರಿಂದ ಶಿವಕುಮಾರ ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬರುತ್ತಾರೆ ಎಂದಿದ್ದರಾದರೂ ಅವರು ಬರಲಿಲ್ಲ.

ಇದಲ್ಲದೆ ಗೃಹ ಸಚಿವ ಡಾ. ಜಿ. ಪರಮೇಶ್ವರ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಗ್ಯ ಸಚಿವ ದಿನೇಶ ಗುಂಡುರಾವ್, ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ದೊಡ್ಡ ಸಂಖ್ಯೆಯಲ್ಲಿ ಸಚಿವರು ಆಗಮಿಸಿರಲಿಲ್ಲ. ಸಚಿವರಾದ ಜಮೀರ್ ಅಹಮದ್‌ ಖಾನ್ ಹಾಗೂ ಶರಣಪ್ರಕಾಶ ಪಾಟೀಲ್ ಅವರಷ್ಟೇ ಆಗಮಿಸಿದ್ದರು.

ಪ್ರಧಾನಿ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದಾರೆ. ಅವರು ಸರ್ಕಾರಿಯಾ ಆಯೋಗ ಮತ್ತು ಗಾಡ್ಲಿಲ್‌ ಆಯೋಗದ ವರದಿ ಓದಿಕೊಳ್ಳಬೇಕು ಎಂದು ಹೇಳಿದ್ದಾರೆ. ಪದೇ ಪದೇ ರಾಜ್ಯಗಳಿಗೆ ಕೇಂದ್ರದಿಂದ ಅನ್ಯಾಯವಾಗುತ್ತಲೇ ಇದೆ. ಅದರಲ್ಲೂ ಜಿಎಸ್‌ಟಿ ಹಂಚಿಕೆ ಮತ್ತು 15ನೇ ಹಣಕಾಸು ಆಯೋಗದ ಹಂಚಿಕೆಯಿಂದ ಅನ್ಯಾಯವಾಗುತ್ತಿದ್ದರೂ ಕೇಂದ್ರ ಸರಿಪಡಿಸುತ್ತಿಲ್ಲ. ಕೇಂದ್ರ ಸರ್ಕಾರವೇ ಒಪ್ಪಿಕೊಂಡಿರುವ ಸರ್ಕಾರಿಯಾ ಆಯೋಗದ ವರದಿ ಸಹ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ಈ ರಾಷ್ಟ್ರಕಂಡ ಜನಪರ ಹಾಗೂ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಆಡಳಿತದ ಶಿಸ್ತು ಇತರರಿಗೆ ಮಾದರಿಯಾಗಿದೆ. ಅತ್ಯಂತ ಆರ್ಥಿಕ ಶಿಸ್ತಿನಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ 3 ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಇದುವರೆಗೆ 559 ಕೋಟಿ ಮಹಿಳೆಯರು ಉಚಿತವಾಗಿ ಸಂಚರಿಸಿರುವುದು ಗೋಲ್ಡನ್ ರೆಕಾರ್ಡ್‌ ಆಗಿದೆ. 1.24 ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ₹2000 ಸಹಾಯಧನ ತಲುಪುತ್ತಿದೆ. 4.57 ಲಕ್ಷ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಪಡಿತರ ಕೊಡುತ್ತಿದ್ದೇವೆ.

ರಾಜ್ಯದ 1.68 ಕೋಟಿ ಮನೆಗಳಿಗೆ ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳ ಅನುಕೂಲ ದೊರೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಮುಖ್ಯಮಂತ್ರಿ ₹83 ಸಾವಿರ ಕೋಟಿಯ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ ಎಂದು ಅವರು ಹೇಳಿದರು. ರಾಜ್ಯದಲ್ಲಿನ 36 ಲಕ್ಷ ರೈತರಿಗೆ ಪಂಪ್‌ಸೆಟ್‌, ಇನ್ನಿತರ ಸೌಕರ್ಯ ಒದಗಿಸಲಾಗಿದೆ. ಇದೇ ರೀತಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ರಾಜ್ಯ ಸರ್ಕಾರ ವಾರ್ಷಿಕವಾಗಿ ಜನರಿಗೆ ಸಾವಿರಾರು ಕೋಟಿ ರು.ಗಳನ್ನು ವ್ಯಯಿಸುತ್ತಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ