ರಾಜ್ಯಪಾಲರ ಅಂಕಿತ, ಜ.11ರಿಂದ ಬಿಬಿಎಂಪಿ ಹೊಸ ಆಡಳಿತ ವ್ಯವಸ್ಥೆ

Published : Jan 08, 2021, 02:38 PM ISTUpdated : Jan 08, 2021, 07:04 PM IST
ರಾಜ್ಯಪಾಲರ ಅಂಕಿತ, ಜ.11ರಿಂದ ಬಿಬಿಎಂಪಿ ಹೊಸ ಆಡಳಿತ ವ್ಯವಸ್ಥೆ

ಸಾರಾಂಶ

ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲ   ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಜ.11ರಿಂದ ಹೊಸ ಆಡಳಿತ ವ್ಯವಸ್ಥೆ ಜಾರಿಯಾಗಲಿದೆ.

ಬೆಂಗಳೂರು, (ಜ.8): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆಗೆ ರಾಜ್ಯಪಾಲರು ಅಂಗೀಕಾರ ಹಾಕಿದ್ದು, ಜ.11ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ. 

"

ವಿಧಾನಸಭೆ ಮತ್ತು ವಿಧಾನಪರಿಷತ್‍ನ ಎರಡು ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಜಂಟಿ ಪರಿಶೀಲನಾ ಸಮಿತಿಯ ಪರಿಶೀಲನೆಗೆ ಒಳಪಟ್ಟು ಅಂತಿಮವಾಗಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ಕ್ಕೆ ರಾಜ್ಯಪಾಲರಾದ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ.

ಚುನಾವಣೆ ಮುಂದೂಡುವಂತೆ 'ಸುಪ್ರೀಂ' ಮೊರೆಹೋದ ಯಡಿಯೂರಪ್ಪ ಸರ್ಕಾರ

ನೂತನ ಕಾಯ್ದೆ ಜ.11ರಿಂದ ಜಾರಿಗೆ ಬರಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ. ನೂತನ ಕಾಯ್ದೆ ಬೆಂಗಳೂರಿನ ದೂರಗಾಮಿ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪುಗೊಂಡಿದ್ದು, ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲಿದೆ. 

ಬಿಬಿಎಂಪಿಗೆ ಇನ್ನು ಮುಂದೆ 8 ವಲಯಗಳಿಗೂ ಪ್ರತ್ಯೇಕ ಆಯುಕ್ತರನ್ನು ನೇಮಿಸಲಾಗುತ್ತದೆ. ಕೇಂದ್ರ ಕಚೇರಿಯಲ್ಲಿ ಈಗಿರುವ ಆಯುಕ್ತರು ಇನ್ನು ಮುಂದೆ ಮುಖ್ಯ ಆಯುಕ್ತರಾಗಿ ಕೆಲಸ ಮಾಡಲಿದ್ದಾರೆ. 

ವಾರ್ಡ್‍ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲು ಇದೇ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಡಳಿತಾತ್ಮಕವಾಗಿ ಹಲವಾರು ಮಹತ್ವದ ಬದಲಾವಣೆಗಳನ್ನು ಅಳವಡಿಸಲಾಗುತ್ತಿದ್ದು, ಇನ್ನು ಮುಂದೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್