
ಬೆಂಗಳೂರು (ಜೂ.25): ರಾಜ್ಯದ ಜನರ ಕೈಗೆ ಅಧಿಕಾರ ನೀಡಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಜತೆಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶನಿವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆ ಮಾಡಲೇ ಬೇಕು. ಕೋರ್ಟ್ ನಿರ್ದೇಶನ ಪಾಲಿಸುವ ಜತೆಗೆ ನಾವು ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು.
ಇದಕ್ಕಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಮಾಡುತ್ತೇವೆ. ವಾರ್ಡ್‌ಗಳು ಎಷ್ಟಿರಲಿವೆ ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ. ಎಲ್ಲದಕ್ಕೂ ರೀತಿ-ನೀತಿ ಎಂಬುದು ಇರುತ್ತದೆ. ಆದರೆ ಬಿಬಿಎಂಪಿ ಚುನಾವಣೆ ಮಾಡುವುದು ಖಚಿತ ಎಂದು ಹೇಳಿದರು. ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಸಹ ಹಿಂದಿನ ಸರ್ಕಾರ ತಡೆ ಹಿಡಿದಿತ್ತು. ನಾವು ಕೊಟ್ಟ ಮಾತಿನಂತೆ ಈ ಎರಡೂ ಚುನಾವಣೆಯನ್ನೂ ಮಾಡುತ್ತೇವೆ ಎಂದರು.
ನನ್ನ ಅವಧಿ ಮುಗಿದಿದೆ, ಇನ್ನು ವರಿಷ್ಠರ ತೀರ್ಮಾನ: ನಳಿನ್ ಕುಮಾರ್ ಕಟೀಲ್
ನಿಗಮ-ಮಂಡಳಿ ನೇಮಕ: ನಿಗಮ-ಮಂಡಳಿ ನೇಮಕಕ್ಕೂ ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು. ಕಾರ್ಯಕರ್ತರು ಇದ್ದರೆ ಮಾತ್ರ ಪಕ್ಷ ಇರುತ್ತದೆ. ಶಾಸಕರು ಹಾಗೂ ಅಧ್ಯಕ್ಷರಿಗೆ ಹೆಸರುಗಳನ್ನು ಶಿಫಾರಸು ಮಾಡಲು ಸೂಚಿಸಿದ್ದೇವೆ. ಅವರು ಶಿಫಾರಸು ಮಾಡಿದ ಬಳಿಕ ಪರಿಶೀಲಿಸಿ ನಿಗದಿತ ಸಮಯದಲ್ಲಿ ನೇಮಕ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಬಿಜೆಪಿ ಅವಧಿಯಲ್ಲಿನ ನಿಗಮ-ಮಂಡಳಿಗ ನೇಮಕ ಮುಂದುವರೆಸುತ್ತೀರಾ? ಎಂಬ ಪ್ರಶ್ನೆಗೆ, ಸದ್ಯಕ್ಕೆ ಇಷ್ಟುಮಾತನಾಡಿದ್ದೇನೆ ಸಾಕು ಎಂದಷ್ಟೇ ಹೇಳಿದರು.
ಗೃಹ ಲಕ್ಷ್ಮಿ ಬಗ್ಗೆ ಸಂಪುಟದಲ್ಲಿ ನಿರ್ಧಾರ: ಗೃಹ ಲಕ್ಷ್ಮಿ ಯೋಜನೆ ಕುರಿತು ಮಾತನಾಡಿದ ಅವರು, ಯಾವಾಗ ಯೋಜನೆ ಜಾರಿಯಾಗುತ್ತದೆ ಎಂಬುದನ್ನು ನಿರ್ಧರಿಸಲು ಸೋಮವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಶುಕ್ರವಾರ ಯೋಜನೆ ರೂಪುರೇಷೆಗಳ ಕುರಿತು ಚರ್ಚಿಸಿದ್ದೇವೆ. ದಿನಾಂಕವನ್ನು ಎಲ್ಲಾ ಸಚಿವರೂ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.
ಅಮೆರಿಕ ದೂತವಾಸಕ್ಕೆ ಡಿಕೆಶಿ ಬದ್ಧತೆ ತೋರಲಿ: ಅಮೆರಿಕ ದೂತಾವಾಸ ಕಚೇರಿ ಬೆಂಗಳೂರಲ್ಲಿ ತೆರೆಯಬೇಕೆಂಬ ಬೇಡಿಕೆ ಇದೀಗ ಈಡೇರುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಬೇಕು ಮತ್ತು ಅಗತ್ಯ ಸೌಕರ್ಯ ಒದಗಿಸಬೇಕು ಎಂದು ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೂತಾವಾಸ ಕಚೇರಿಯ ಬೇಡಿಕೆ ಕಳೆದ 15-20 ವರ್ಷಗಳ ಹಿಂದಿನದು. ಅದು ಈಗ ಈಡೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿ ಅತ್ಯಂತ ಪ್ರಯೋಜನಕಾರಿಯಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಆಗಬಹುದು ಎಂದು ಅನಿಸುತ್ತಿದೆ: ಯೋಗೇಶ್ವರ್
ಬೆಂಗಳೂರು- ಅಹಮದಾಬಾದ್‌ನಲ್ಲಿ ದೂತಾವಾಸ ತೆರೆಯಲಾಗುತ್ತಿದೆ. ರಾಜ್ಯದ 4-5 ಲಕ್ಷ ಜನರಿಗೆ ಪ್ರಯೋಜನ ಸಿಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕಾಗಿ ಪ್ರಯತ್ನಿಸಿದ್ದರು. ಸ್ಥಳ, ಸೌಕರ್ಯ ಕೊಡುವುದಾಗಿ ತಿಳಿಸಿದ್ದರು. ಮಾಜಿ ಸಚಿವ ಡಾ ಸಿ.ಎನ್.ಅಶ್ವತ್ಥನಾರಾಯಣ ಅವರೂ ಇದಕ್ಕಾಗಿ ಪ್ರಯತ್ನ ಮಾಡಿದ್ದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಷಯದಲ್ಲಿ ಬದ್ಧತೆ ಪ್ರದರ್ಶಿಸಬೇಕು ಮತ್ತು ಸೌಕರ್ಯ ನೀಡಬೇಕು. ಇದೇ ವರ್ಷದೊಳಗೆ ದೂತಾವಾಸ ಕಚೇರಿ ಆರಂಭಕ್ಕೆ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.