
ಹುಬ್ಬಳ್ಳಿ (ಏ.18) : 1977ರಲ್ಲಿ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಿದಂತೆ ಪ್ರಸಕ್ತ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಶಕ್ತಿಯನ್ನು ಸೋಲಿಸಲು ಸಂಕಲ್ಪ ಮಾಡಬೇಕು ಎಂದು ಸಿಟಿಜನ್ಸ್ ಫಾರ್ ಡೆಮಾಕ್ರಸಿ(ಸಿಎಫ್‌ಡಿ)ನ ರಾಷ್ಟ್ರೀಯ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 1977ರಲ್ಲಿ ನಡೆದ ಚುನಾವಣೆಯಲ್ಲಿ ಸರ್ವಾಧಿಕಾರಿ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಿದಂತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ, ಸಂವಿಧಾನ, ಅದರ ಮೌಲ್ಯಗಳು, ಸಂಸ್ಥೆಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತವನ್ನು ರಕ್ಷಿಸಬೇಕು.
ಸಿಟಿಜನ್ ಫಾರ್ ಡೆಮಾಕ್ರಸಿ (ಸಿಎಫ್‌ಡಿ), ಜನಾಂದೋಲನ ಮಹಾಮೈತ್ರಿ (ಜೆಎಂಎಂ), ಜನತಂತ್ರ ಪ್ರಯೋಗ ಶಾಲಾ (ಜೆಪಿಎಸ್) ಇತ್ಯಾದಿ ಸಂಘಟನೆಗಳ ನೇತೃತ್ವದಲ್ಲಿ ದೇಶದಲ್ಲಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಸಂಕಲ್ಪ ಮಾಡಿದ್ದು, ಈ ಕುರಿತು 18 ಪುಟಗಳ ಜನತಾ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ. ಎಲ್ಲಡೆ ಬಿಜೆಪಿ ಭ್ರಷ್ಟಾಚಾರ, ಅವ್ಯವಹಾರ ಕುರಿತು ಬಯಲಿಗೆಳೆದು ಜನಜಾಗೃತಿ ಮೂಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಭ್ರಷ್ಟಾಚಾರ ಆರೋಪಿ ಮಾಡಾಳ್ 'ವಿಜಯೋತ್ಸವ': ಎಸ್‌ಆರ್ ಹಿರೇಮಠ ಸಿಡಿಮಿಡಿ
ಈ ವೇಳೆ ರಾಘವೇಂದ್ರ ಕುಷ್ಟಗಿ, ವೆಂಕನಗೌಡ್ರ ಪಾಟೀಲ, ರಿಯಾಜಅಹ್ಮದ ನದಾಫ, ಸಯ್ಯದ ಹೈದರ ಸೇರಿದಂತೆ ಹಲವರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.