ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲಾ ಭರವಸೆಗಳನ್ನು ಹಂತ, ಹಂತವಾಗಿ ಈಡೇರಿಸುತ್ತೇವೆ. ಈಗಾಗಲೇ ಇದರ ಕುರಿತಾಗಿ ಸಿದ್ಧತೆಗಳು ಸಹ ಆರಂಭವಾಗಿವೆ. ತುಸು ಸಮಯ ಹಿಡಿಯುತ್ತದೆ, ತಾಳ್ಮೆಯಿಂದ ಇರಿ. ಹಾಗೆಂದು ಜನರನ್ನು ತುಂಬಾ ದಿನ ಕಾಯಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೇ ಹೆಬ್ಬಾಳಕರ ಭರವಸೆ ನೀಡಿದ್ದಾರೆ.
ತಾಳ್ಮೆಯಿಂದ ಇರಿ, ಗ್ಯಾರಂಟಿ ಭರವಸೆ ಈಡೇರಿಸುತ್ತೇವೆ: ಲಕ್ಷ್ಮೇ
ಬೆಳಗಾವಿ (ಮೇ.30): ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲಾ ಭರವಸೆಗಳನ್ನು ಹಂತ, ಹಂತವಾಗಿ ಈಡೇರಿಸುತ್ತೇವೆ. ಈಗಾಗಲೇ ಇದರ ಕುರಿತಾಗಿ ಸಿದ್ಧತೆಗಳು ಸಹ ಆರಂಭವಾಗಿವೆ. ತುಸು ಸಮಯ ಹಿಡಿಯುತ್ತದೆ, ತಾಳ್ಮೆಯಿಂದ ಇರಿ. ಹಾಗೆಂದು ಜನರನ್ನು ತುಂಬಾ ದಿನ ಕಾಯಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೇ ಹೆಬ್ಬಾಳಕರ(Lakshmi hebbalkar minister) ಭರವಸೆ ನೀಡಿದ್ದಾರೆ.
undefined
ಕುವೆಂಪು ನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಗ್ಯಲಕ್ಷ್ಮೇ ಯೋಜನೆ ನಮ್ಮ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ, ಮನೆ ಒಡತಿಗೆ .2,000 ಮಾಸಿಕ ಗೌರವಧನ ಸೇರಿದಂತೆ ಜನತೆಗೆ ನೀಡಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು.
ಬಿಜೆಪಿಯವರು ಪ್ರತಿಯೊಬ್ಬರ ಖಾತೆಗೆ .15 ಲಕ್ಷ ಹಾಕುತ್ತೇವೆ ಎಂದು ಹೇಳಿ ಜನರನ್ನು ನಂಬಿಸಿ ಕೈ ಕೊಟ್ಟಿದ್ದಾರೆ. ನಾವು ಹಾಗಲ್ಲ, ಕೊಟ್ಟಮಾತಿನಂತೆ ನಡೆದುಕೊಳ್ಳುತ್ತೇವೆ. ತೀರ ವಿಳಂಬ ಮಾಡದೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದರು.
ಸುವರ್ಣಸೌಧದಲ್ಲಿ ಇಂದು ಸಭೆ
ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ(Satish jarkiholi) ನೇತೃತ್ವ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೇ ಹೆಬ್ಬಾಳಕರ ಉಪಸ್ಥಿತಿಯಲ್ಲಿ ಮೇ.30 ಸುವರ್ಣ ವಿಧಾನಸೌಧದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.