
ಬೆಂಗಳೂರು, (ಜ.01): ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನರಾಗಿದ್ದಾರೆ.
ಬೆಂಗಳೂರಿನ ಹೊಟೆಲ್ ಕೊಠಡಿಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಬಿವಿಪಿಯಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ MLC ನಿಧನ
ಇದೀಗ ಅವರು ಅಗಲಿಕೆಯಿಂದ ಬೆಳಗಾವಿಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತಬಿದ್ದಂತಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಅಲ್ಲದೇ ಪೂರ್ಣಾವಧಿಯಾಗಿ ಬಿಜೆಪಿ, ಸಂಘ ಪರಿವಾರದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಇನ್ನು ಇವರ ನಿಧನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರುಗಳು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.