ರಾಜ್ಯ ಸರ್ಕಾರವು ತನ್ನ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಮಾರ್ಗಕ್ಕೆ ಮುಂದಾಗಿ ಬಡವರ ಹೊಟ್ಟೆ ಮೇಲೆ ಹೊಡೆಯುವ . ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ನಂತರ ಅನರ್ಹ ಕಾರ್ಡ್‌ಗಳಿವೆ ಎಂಬ ಅರಿವು ಸರ್ಕಾರಕ್ಕೆ ಬಂದಿದೆ. ಈಗ ಎಲ್ಲ ಚುನಾವಣೆಗಳು ಮುಗಿದ ಬಳಿಕ ಬಿಪಿಎಲ್ ಕಾರ್ಡ್‌ಗಳಿಗೆ ಕೈ ಹಾಕಿರುವುದು ಗ್ಯಾರಂಟಿ ಯೋಜನೆ ನಿಲ್ಲಿಸುವ ಸೂಚನೆಯಾಗಿದೆ: ಸಂಸದ ಜಗದೀಶ ಶೆಟ್ಟರ್
ಹುಬ್ಬಳ್ಳಿ(ನ.21): ಯಾವುದೇ ರೀತಿಯ ಪೂರ್ವಾಪರ ಯೋಚನೆಗಳಿಲ್ಲದೇ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಈಗ ಅನ್ನಭಾಗ್ಯ ಯೋಜನೆ ಮುನ್ನಡೆಸಲು ಆಗದಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಮಾರ್ಗಕ್ಕೆ ಮುಂದಾಗಿ ಬಡವರ ಹೊಟ್ಟೆ ಮೇಲೆ ಹೊಡೆಯುವ . ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ನಂತರ ಅನರ್ಹ ಕಾರ್ಡ್‌ಗಳಿವೆ ಎಂಬ ಅರಿವು ಸರ್ಕಾರಕ್ಕೆ ಬಂದಿದೆ. ಈಗ ಎಲ್ಲ ಚುನಾವಣೆಗಳು ಮುಗಿದ ಬಳಿಕ ಬಿಪಿಎಲ್ ಕಾರ್ಡ್‌ಗಳಿಗೆ ಕೈ ಹಾಕಿರುವುದು ಗ್ಯಾರಂಟಿ ಯೋಜನೆ ನಿಲ್ಲಿಸುವ ಸೂಚನೆಯಾಗಿದೆ ಎಂದರು.
undefined
ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆಯಬೇಕು: ಜಗದೀಶ್ ಶೆಟ್ಟರ್
ವಾಲ್ಮೀಕಿ ಹಗರಣ, ಮುಡಾ ಹಗರಣದ ಸೇರಿದಂತೆ ಇತರೆ ಅವ್ಯವಹಾರಗಳು ರಾಜ್ಯ ಸರ್ಕಾರಕ್ಕೆ ಕೆಟ್ಟು ಹೆಸರು ಬಂದಿದೆ. ಇದನ್ನು ಮರೆಮಾಚುವ ಉದ್ದೇಶದಿಂದಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರ್ಕಾರವು ಸುಳ್ಳು ಆರೋಪ ಮಾಡುವ ಕೆಲಸ ಆರಂಭಿಸಿದೆ. ಶಾಸಕರ ಖರೀದಿಗೆ ಬಿಜೆಪಿಯಿಂದ ಆಮೀಷವೊಡ್ಡಿದ್ದಾರೆ ಎನ್ನುವ ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದನ್ನು ಶಾಸಕ ರವಿ ಗಣಿಗೆ ಮೂಲಕ ಹೇಳಿಸಿದ್ದಾರೆ. ಸರ್ಕಾರದ ಬಳಿ ಈ ಕುರಿತು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಈ ರೀತಿ ವಿಷಯಾಂತರ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಭೆ ತರುವಂತಹದಲ್ಲ ಎಂದು ವಾಗ್ದಾಳಿ ನಡೆಸಿದರು.
ಈಗ ಎಲ್ಲ ಚುನಾವಣೆಗಳು ಮುಗಿದ ಬಳಿಕ ಬಿಪಿಎಲ್ ಕಾರ್ಡ್‌ಗಳಿಗೆ ಕೈ ಹಾಕಿರುವುದು ಗ್ಯಾರಂಟಿ ಯೋಜನೆ ನಿಲ್ಲಿಸುವ ಸೂಚನೆಯಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.
ಮುಡಾ ಹಗರಣ: ಭಂಡತನವಿದ್ದರೆ ಏನು ಮಾಡಲು ಸಾಧ್ಯ, ಜಗದೀಶ ಶೆಟ್ಟರ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನದಿಂದ ದಸರಾ ಉದ್ಘಾಟನೆಗೆ ಹೋಗುತ್ತೇನೆ ಎಂದರೆ ಯಾರೂ ಏನು ಮಾಡಲು ಸಾಧ್ಯ. ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎನ್ನುವ, ನೈತಿಕತೆ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ ಇನ್ನು ಮೇಲಾದರೂ ಅರ್ಥ ಮಾಡಿಕೊಳ್ಳಬೇಕು. ಹಿಂದೆ ಯಡಿಯೂರಪ್ಪ ಅವರ ಮೇಲೆ ಪ್ರಕರಣ ದಾಖಲಾದ ವೇಳೆ ಇದೇ ಸಿದ್ದರಾಮಯ್ಯ ಅವರು ಪ್ರಕರಣದ ವಿಚಾರಣೆ ನಡೆಯುವಾಗ ಅವರ ಕೆಳಗಿನ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಹೇಗೆ ತನಿಖೆ ಮಾಡುವುದಕ್ಕೆ ಸಾಧ್ಯ. ಅದಕ್ಕೆ ರಾಜೀನಾಮೆ ಕೊಡಬೇಕು ಎಂದಿದ್ದರು. ಆದರೆ, ತಮ್ಮ ಮೇಲೆ ಆರೋಪ, ಪ್ರಕರಣ ದಾಖಲಾಗಿದ್ದರೂ ಈಗೇಕೆ ರಾಜೀನಾಮೆ ನೀಡುತ್ತಿಲ್ಲ? ಎಂದು ಪ್ರಶ್ನಿಸಿದರು.
ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿ ಕೊಬ್ಬು ಬಳಸಿದ ಬಗ್ಗೆ ರಾಹುಲ್ ಗಾಂಧಿ ಯಾಕೆ ಸೈಲೆಂಟ್? ಜಗದೀಶ್ ಶೆಟ್ಟರ್ ಕಿಡಿ
ದ್ವೇಷದ ರಾಜಕಾರಣ:
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುರಿತು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್. ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು. ಕುಮಾರಸ್ವಾಮಿ ಕೇಂದ್ರದ ಸಚಿವರು. ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಅವರು ಈಗಾಗಲೇ ಕೇಂದ್ರಕ್ಕೆ ಈ ಬಗ್ಗೆ ದೂರು ನೀಡಿದ್ದಾರೆ. ಆಗ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಲೋಕಾಯುಕ್ತದವರು ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನು ಕರೆಯಿಸಿದ್ದಾಗ ವಿಚಾರಣೆಗೆ ಹಾಜರಾಗಿದ್ದಾರೆ. ಅದನ್ನು ಬಿಟ್ಟು ಬೇಕಾಬಿಟ್ಟಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಹರಿಹಾಯ್ದರು.
ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದಿನ ಯಾವುದೋ ಪ್ರಕರಣದ ಎಫ್ ಐಆರ್‌ಇಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲರ ಮೇಲೂ ಎಫ್‌ಐಆರ್‌ಮಾಡಿಸಿ ತೊಂದರೆ ಕೊಡುವುದು ಆರಂಭವಾಗಿದೆ. ಆ ಮೂಲಕ ಮುಡಾ ಹಗರಣದಲ್ಲಿ ಜನರ ಮನಸ್ಸು ಬೇರೆಡೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.