
ಬೆಳಗಾವಿ(ಮೇ.16): ಜಿಲ್ಲೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳಲ್ಲಿ ಗೆಲ್ಲಲು ದಿ.ಸುರೇಶ್ ಅಂಗಡಿ ಅವರ ಅನುಪಸ್ಥಿಯೂ ಕಾರಣವಾಗಿರಬಹುದು. ಅಲ್ಲದೇ ಸುರೇಶ್ ಅಂಗಡಿ ಅವರು ಇದ್ದಿದ್ದರೇ ಈ ರೀತಿ ಆಗುತ್ತಿರಲಿಲ್ಲ ಎಂದು ಬಹಳ ಜನರು ಹೇಳಿಕೊಂಡಿದ್ದಾರೆ ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ ಅಂಗಡಿಯವರ ಅನುಪಸ್ಥಿತಿ ಸೋಲಿಗೆ ಕಾರಣ ಆಯ್ತಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದು ಒಂದು ಕಾರಣ ಆಗಿರಬಹುದು. ಬಹಳಷ್ಟು ಜನ ಕಾರ್ಯಕರ್ತರು ಸುರೇಶ್ ಅಂಗಡಿ ಅವರು ಇದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಹೇಳುತ್ತಿದ್ದರು. ಆದರೂ ಸರ್ ಇಲ್ಲದಿದ್ದರೂ ಅವರು ನಮ್ಮ ಜೊತೆ ಇದ್ದಾರೆ ಎಂದು ತಿಳಿದುಕೊಂಡೇ ಎಲ್ಲರೂ ಕೆಲಸ ಮಾಡಿದ್ದೇವು. ಕೇಂದ್ರ ಮತ್ತು ರಾಜ್ಯ ನಾಯಕರು ಬಂದು ಒಳ್ಳೆಯ ರೀತಿ ಪ್ರಚಾರ ಮಾಡಿದ್ದರು. ಆದರೂ ಸೋಲಾಗಿದ್ದು, ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್‌ನ ಶೆಟ್ಟರ್ ಗೆಲ್ತಾರೆ: ಬೀಗರ ಪರ ಬಿಜೆಪಿ ಸಂಸದೆ ಅಂಗಡಿ ಬ್ಯಾಟಿಂಗ್!
ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದ್ದು, ಗೆದ್ದಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮಗೆ ಸೋಲಾಗಿರುವ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ. ಜನರು ಕೊಟ್ಟ ಸಂದೇಶಕ್ಕೆ ನಾವು ತಲೆ ಬಾಗಬೇಕಾಗುತ್ತದೆ. ನಮ್ಮ ಸರ್ಕಾರದ ಯೋಜನೆಗಳು ಮನೆ ಮನೆಗಳಿಗೆ ತಲುಪಿಸಲು ಸಾಧ್ಯ ಆಗಲಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮನ ಮುಟ್ಟುವಂತೆ ತಿಳಿಸುವ ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಸಾಕಷ್ಟುಶ್ರಮವಹಿಸಿದ್ದರು. ಮುಂದೆ ಇನ್ನು ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಆಯ್ಕೆಯಾಗಿರುವ ನಮ್ಮ ಪಕ್ಷದ 7 ಶಾಸಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಸಂಸದೆ ಮಂಗಲ ಅಂಗಡಿ ಅವರು, ಅದು ವೈಯಕ್ತಿಕ ವಿಷಯ. ಅದರ ಬಗ್ಗೆ ನಾನು ಹೆಚ್ಚಿಗೆ ಏನೂ ಹೇಳಲ್ಲ. ಅವರು ಗೆಲ್ಲುತ್ತಾರೆಂದು ವೈಯಕ್ತಿಕವಾಗಿ ಹೇಳಿದ್ದೆ, ಅದು ಪಾರ್ಟಿ ವತಿಯಿಂದ ಹೇಳಿದ್ದಲ್ಲ. ಆದರೂ ಸೋಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.