
ಬೆಳಗಾವಿ, (ನ.06): ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲೂ ಸಹ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಪೈಪೋಟಿ ನಡೆಸಿವೆ. ಪಕ್ಷವನ್ನ ತಳ ಮಟ್ಟದಿಂದ ಬೆಳಸಬೇಕಿದ್ದರೆ ಸ್ಥಳೀಯ ಸಂಸ್ಥೆ ಚುನಾವಣೆಗಳು ಪ್ರಮುಖ ಪಾತ್ರವಹಿಸುತ್ತವೆ. ಇದರಿಂದ ಈ ಮೂರು ಪಕ್ಷಗಳು ಹಳ್ಳಿ ಪಾಲಿಟಿಕ್ಸ್ ಹೆಚ್ಚಿನ ಪ್ರಮುಖ್ಯತೆ ನೀಡುತ್ತಿವೆ.
ಮತ್ತೊಂದೆಡೆ ಪಕ್ಷ ವಿರೋಧಿ ಚಟುವಟಿಕೆ ಕಾರಣದಿಂದಾಗಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ದೇವಪ್ಪ ಪೂಜೇರ ಅವರನ್ನು ಉಚ್ಛಾಟಿಸಲಾಗಿದೆ' ಎಂದು ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.
ಮಾಜಿ ಶಾಸಕ ಶೀಘ್ರವೇ ಬಿಜೆಪಿಗೆ ಸೇರ್ಪಡೆ: ಹೊಸ ಬಾಂಬ್ ಸಿಡಿಸಿದ ಸಚಿವ ಜಾರಕಿಹೊಳಿ
ಸವದತ್ತಿ-ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನವಳ್ಳಿ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ವಿಜಯ ಅಮಠೆ ವಿರುದ್ಧ ಅವರು ಕೆಲಸ ಮಾಡಿದ್ದಾರೆ. ತಾಯಿ ಪಾರ್ವತಿ ಪೂಜೇರ ಅವರನ್ನು ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಿ ಬೆಂಬಲಿಸಿದ್ದಾರೆ.
ಈ ಬಗ್ಗೆ ಅಲ್ಲಿನ ಶಾಸಕರೂ ಆದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಪತ್ರ ಬರೆದಿದ್ದರು. ಸವದತ್ತಿ ಮಂಡಲದ ಅಧ್ಯಕ್ಷ ಈರಣ್ಣ ಚಂದರಗಿ ಸೂಚನೆಯನ್ನೂ ಧಿಕ್ಕರಿಸಿ ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಪಕ್ಷದ ಜವಾಬ್ದಾರಿಗಳನ್ನು ಹಿಂಪಡೆಯಲಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.