ರಾಜ್ಯದ 2ನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

Published : Dec 18, 2025, 09:16 PM IST
DK Shivakumar

ಸಾರಾಂಶ

ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ. ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಳಗಾವಿ (ಡಿ.18): ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ. ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಅಶೋಕ ವೃತ್ತದಲ್ಲಿ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮೆಲ್ಲರಿಗೂ ದೊಡ್ಡ ಜವಾಬ್ದಾರಿ ಇದೆ. ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ನಮಗೆ ಎಲ್ಲದರ ಮೇಲೂ ನಂಬಿಕೆ ಇದೆ. ನಾವೆಲ್ಲರೂ ನಮಗೆ ಸಿಕ್ಕ ಅವಕಾಶದಲ್ಲಿ ಪರಿಸರ ಕಾಪಾಡಲು ನಮ್ಮ ಸರ್ಕಾರದ ಯೋಜನೆಯಲ್ಲಿ ಅನುದಾನ ನೀಡಲಾಗಿದೆ.

ಬೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾದ ಬಳಿಕ ಸುಮಾರು ₹200 ಕೋಟಿಗಳಷ್ಟು ಅನುದಾನವನ್ನು ಅನೇಕ ಯೋಜನೆಗಳ ಮೂಲಕ ಈ ನಗರಕ್ಕೆ ನೀಡಿದ್ದಾರೆ ಎಂದು ಹೇಳಿದರು. ಮುಂದೆ ನಮ್ಮ ಸರ್ಕಾರ ಈ ಪ್ರದೇಶದ ಅಭಿವೃದ್ಧಿ ಮಾಡಿ, ಉದ್ಯೋಗ ನೀಡಲು ಅಗತ್ಯ ಕ್ರಮ ಕೈಗೊಳ್ಳಲಿದೆ. ನಾವು ನೀವು ಜೊತೆಯಾಗಿ ಕೈಜೋಡಿಸಿ ಹೆಜ್ಜೆ ಹಾಕೋಣ ಎಂದ ಅವರು, ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದರು. ಅದರ ಶತಮಾನೋತ್ಸವ ಹಿನ್ನೆಲೆಯಲ್ಲಿ ಕಳೆದ ವರ್ಷ ನಾವು ಬೆಳಗಾವಿಗೆ ಬಂದು ಗಾಂಧಿ ಭಾರತ ಎಂಬ ಕಾರ್ಯಕ್ರಮ ಮಾಡಿದೆವು. ಸ್ವಚ್ಛತೆ ಹಾಗೂ ಪರಿಸರ ಕಾಪಾಡುವುದು ಅವರ ಉದ್ದೇಶವಾಗಿತ್ತು ಎಂದರು.

ನಾನು ಚಿಕ್ಕ ವಯಸ್ಸಿನಲ್ಲಿ ಕ್ರಾಸ್ ಕಂಟ್ರಿ ಓಡುತ್ತಿದ್ದೆ. ಈಗ ವಯಸ್ಸಾಗಿದೆ. ಆದರೆ ನನ್ನ ಮನಸು ನಿಮ್ಮಷ್ಟೇ ತಾರುಣ್ಯವಾಗಿದೆ. ನನ್ನ ಕೈಲಾದಷ್ಟು ನಡೆಯುತ್ತೇನೆ. ನಿಮಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಮಾತನಾಡಿ, ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ. ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿರಬೇಕೆಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನಸಾಗಿತ್ತು. ಅವರ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಸ್ವಚ್ಛತೆಗೆ ಆದ್ಯತೆ

ನಮ್ಮ ಸರ್ಕಾರ ನಗರ ಪ್ರದೇಶಗಳು ಸೇರಿದಂತೆ ಪ್ರತಿಯೊಂದು ಪ್ರದೇಶದ ಸ್ವಚ್ಛತೆಗೆ ಆದ್ಯತೆ ನೀಡಿದೆ. ನಗರಗಳಲ್ಲಿ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಲಾಗುತ್ತಿದೆ ಎಂದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಉತ್ತರ ಶಾಸಕ ಆಸೀಫ್‌ (ರಾಜು) ಸೇಠ್‌ ಮೊದಲಾದವರು ಉಪಸ್ಥಿತರಿದ್ದರು.ಸ್ವಚ್ಛತಾ ಓಟ ನಗರದ ಅಶೋಕ ವೃತ್ತದಿಂದ ಆರಂಭಗೊಂಡು, ಸಂಗೊಳ್ಳಿ ರಾಯಣ್ಣ ವೃತ್ತ, ಶ್ರೀ ಕೃಷ್ಣದೇವರಾಯ ವೃತ್ತ ಸೇರಿದಂತೆ ಮತ್ತಿತರ ಮಾರ್ಗಗಳಲ್ಲಿ ಸಂಚರಿಸಿ ಕೋಟೆ ಕೆರೆ ಆವರಣ ತಲುಪಿತು. ಮೈ ಕೊರೆಯುವ ಚಳಿಯ ನಡುವೆಯೂ ಎಲ್ಲ ವಯೋಮಾನದವರು ಓಟದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಜತೆಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ: ಸಂಸದ ಡಾ.ಕೆ.ಸುಧಾಕರ್
'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ