ಹಳ್ಳಿಯಲ್ಲಿ ಪಕ್ಷ ಸಂಘಟೆ ಮಾಡಿದ ಬಿಜೆಪಿ ನಾಯಕ ಈಗ ದಿಲ್ಲಿ ಪ್ರತಿನಿಧಿ...!

By Suvarna News  |  First Published Aug 30, 2020, 10:59 PM IST

ಬೆಳಗಾವಿ ಬಿಜೆಪಿ ಮುಖಂಡ ಬಿಜೆಪಿ ಸರ್ಕಾರದಲ್ಲಿ ಲಾಟ್ರಿ ಮೇಲೆ ಲಾಟ್ರಿ ಹೊಡೆಯುತ್ತಲೇ ಬಂದಿದ್ದು, ಇದೀಗ ಇವರಿಗೆ ಮತ್ತೆ ಬಿಎಸ್‌ವೈ ಸರ್ಕಾರ ಉನ್ನತ ಹುದ್ದೆ ನೀಡಿದೆ.


ಬೆಂಗಳೂರು, (ಆ.30): ಹಳ್ಳಿಯಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಶಂಕರಗೌಡ ಪಾಟೀಲ್ ಈಗ ದೆಹಲಿ ಮುಟ್ಟಿದ್ದಾರೆ.

ಹೌದು... ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಇದೀಗ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ.

Tap to resize

Latest Videos

ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು (ಭಾನುವಾರ) ಆದೇಶ ಹೊರಡಿಸಿದೆ.

ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಪ್ರಧಾನಿ ಮೋದಿ ಶಹಬ್ಬಾಶ್..!

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ರಾಜ್ಯ ಸರ್ಕಾರ, ಹಿಂದಕ್ಕೆ ಪಡೆದು  ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಿದೆ.

ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಅಧಿಕಾರಕ್ಕೆ ಬಂದಾಗ ಅನೇಕ ಹುದ್ದೆಗಳನ್ನು ಪಡೆದುಕೊಂಡಿದ್ದರು,ಬೆಳಗಾವಿ ಬುಡಾ ಅದ್ಯಕ್ಚ, ಅರಣ್ಯ ನಿಗಮದ ಅದ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಮಾಡಿರುವ ಶಂಕರಗೌಡ ಪಾಟೀಲರು ಈಗ ಕರ್ನಾಟಕ ಸರ್ಕಾರದ ದೇಹಲಿಯ ವಿಶೇಷ ಪ್ರತಿನಿಧಿಯಾಗಿದ್ದಾರೆ.

click me!