ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಎಲ್ಲೂ ಕಾಣಿಸ್ತಿಲ್ಲ: ಸತೀಶ ಜಾರಕಿಹೊಳಿ

By Kannadaprabha News  |  First Published Apr 11, 2024, 8:57 AM IST

ಕೇಂದ್ರ ಬಿಜೆಪಿ ಸರ್ಕಾರದ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಇದೆ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ಹವಾ, ಕಾಂಗ್ರೆಸ್ ಪಕ್ಷದ ಹವಾ ಇದೆ. ಮೋದಿ ಹವಾ ಎಲ್ಲಿಯೂ ಕಾಣುತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ವ್ಯಂಗ್ಯವಾಡಿದ್ದಾರೆ.


ಸಂಕೇಶ್ವರ ಏ.11): ಕೇಂದ್ರ ಬಿಜೆಪಿ ಸರ್ಕಾರದ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಇದೆ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ಹವಾ, ಕಾಂಗ್ರೆಸ್ ಪಕ್ಷದ ಹವಾ ಇದೆ. ಮೋದಿ ಹವಾ ಎಲ್ಲಿಯೂ ಕಾಣುತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ವ್ಯಂಗ್ಯವಾಡಿದ್ದಾರೆ.

ಬುಧವಾರ ಪಟ್ಟಣದ ನೇಸರಿ ಗಾರ್ಡನ್‌ದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಅಧಿಕಾರಕ್ಕೇರಲು ಜನತೆಗೆ ಸಾಕಷ್ಟು ಭರವಸೆ ನೀಡಿದರು. ಆದರೆ ಇದುವರೆಗೆ ಒಂದೇ ಒಂದು ಭರವಸೆ ಈಡೇರಿಸಲಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Tap to resize

Latest Videos

ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಜನರ ಒಲವು ಕಾಣುತ್ತಿದೆ. ಸಂಸದ ಜೊಲ್ಲೆ ವಿರುದ್ಧ ಇಲ್ಲಿನ ಜನರಿಗೆ ಅಸಮಾಧಾನ ಇದೆ. ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಕರೆ ನೀಡಿದರು.

ಮೋದಿ ಅಲೆ ಎಂಬುದೆಲ್ಲ ಸುಳ್ಳು, ಬಿಜೆಪಿ ಸೃಷ್ಟಿ: ಸೌಮ್ಯಾರೆಡ್ಡಿ

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕವಾಗಿ ಸೇವೆ ಸಲ್ಲಿಸುತ್ತಿದ್ದು, ಚಿಕ್ಕೋಡಿ ಲೋಕಸಭೆ ಮತದಾರರು ಆಶೀರ್ವದಿಸಿ, ಲೋಕಸಭೆಗೆ ಕಳುಹಿಸುವ ಮೂಲಕ ಸೇವೆ ಸಲ್ಲಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ತಂದೆ, ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಸ್ಥಳೀಯ ನಾಯಕರು ಹಾಗೂ ಮುಖಂಡರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕೆಲಸ ಮಾಡುವುದರ ಮೂಲಕ ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆಂದು ಭರವಸೆ ನೀಡಿದರು.

ಮಾಜಿ ಸಚಿವ ಎ.ಬಿ. ಪಾಟೀಲ ಮಾತನಾಡಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಪ್ರಿಯಂಕಾ ಜಾರಕಿಹೊಳಿ ಆಯ್ಕೆಯಾಗುವುದು ನಿಶ್ಚಿತ. ಪಕ್ಷದ ಪರ ಉತ್ತಮ ವಾತಾವರಣವಿದೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಸಚಿವ ಶಶಿಕಾಂತ ನಾಯಕ ಮಾತನಾಡಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಬಾರಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೇಮಕ ಪತ್ರದ ಆದೇಶ ಪ್ರತಿಗಳನ್ನು ವಿತರಿಸಲಾಯಿತು. ವಿಪ ಮಾಜಿ ಸದಸ್ಯ ವೀರಕುಮಾರ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ, ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ ರವದಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕಾಂಗ್ರಸ್ ಪಕ್ಷದ ಮುಖಂಡರಾದ ಬಸವರಾಜ ಕೋಳಿ, ಸುರೇಶ್ ಹುಣಚಾಳೆ, ವಿನಯ ಪಾಟೀಲ, ದಿಲೀಪ್ ಹೊಸಮನಿ, ಮಹೇಶ ಹಟ್ಟಿಹೋಳಿ, ಶ್ಯಾನೂಲ್ ತಹಸೀಲ್ದಾರ್, ಕಾಡಪ್ಪ ಕಟ್ಟಿ, ಪ್ರಶಾಂತ ಕೋಳಿ, ಶೀತಲ್ ಮಠಪತಿ, ಮಹಿಳಾ ಮುಖಂಡರಾದ ಸುನೀತಾ ಗಸ್ತಿ, ಜಯಶ್ರೀ ಮಾಳಗಿ, ಲತಾ ಮಾಳಗಿ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು.

ಮೋದಿ ಎಷ್ಟು ಗ್ಯಾರಂಟಿ ನೀಡಿದ್ದಾರೆಂಬ ಪಟ್ಟಿ ಬಿಡುಗಡೆಗೊಳಿಸಲಿ: ಸಚಿವ ಸತೀಶ

ನಿಮ್ಮೆಲ್ಲರ ಪ್ರೀತಿ, ಆಶಿರ್ವಾದ ದಿಂದ ನನಗೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವಕಾಶ ಸಿಕ್ಕಿದೆ .ನಾಲ್ಕೈದು ವರ್ಷಗಳಿಂದ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದೇನೆ. ಸತೀಶ ಜಾರಕಿಹೊಳಿ ಫೌಂಡೇಶನ್ ಮೂಲಕ ಯುವಕರಿಗೆ ಸೇನೆ, ಪೊಲೀಸ್, ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಉಚಿತವಾಗಿ ನೀಡುತ್ತಿದ್ದೇವೆ.

- ಪ್ರಿಯಾಂಕಾ ಜಾರಕಿಹೋಳಿ ಕಾಂಗ್ರೆಸ್ ಅಭ್ಯರ್ಥಿ

click me!