
ಬೆಳಗಾವಿ (ಆ.15) :ಬೆಳಗಾವಿ (ಆ.15) : ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣ ಮೂಲದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾಮಚಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾತಂತ್ರ್ಯ ಮಹೋತ್ಸವ ಧ್ವಜಾರೋಹಣ ವೇಳೆ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ನವ್ಯಶ್ರೀ. ಬೆಳಗಾವಿ ರಾಮಚಂದ್ರ ಹೋಟೆಲ್ ಬಳಿ ನವ್ಯಶ್ರೀ ವಶಕ್ಕೆ ಪಡೆದ ಪೊಲೀಸರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ನುಗ್ಗಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ನವ್ಯಶ್ರೀ ರಾವ್. ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಕುಮಾರ್ ಟಾಕಳೆ ಬಂಧಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಳು. ರಾಜಕುಮಾರ ಟಾಕಳೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾರೆ.
ಟಾಕಳೆ ಬಂಧನಕ್ಕೆ ನವ್ಯಶ್ರೀ ಆಗ್ರಹ: BIGG BOSSಗೂ ಹೋಗುವಾಸೆ ಬಿಚ್ಚಿಟ್ಟ ಕಾಂಗ್ರೆಸ್ ಕಾರ್ಯಕರ್ತೆ
ಕೆಲ ತಿಂಗಳ ಹಿಂದೆ ನವ್ಯಶ್ರೀ ರಾವ್ ಜತೆ ಅಶ್ಲೀಲ ವಿಡಿಯೋ ಒಂದರಲ್ಲಿ ಕಾಣಿಸಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದರ ಜೊತೆಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇರಿ ಹಲವು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಜೊತೆಗೆ ನವ್ಯಶ್ರಿ ಇರುವ ಫೋಟೋ ಕೂಡ ವೈರಲ್ ಆಗಿತ್ತು. ರಾಜಕುಮಾರ್ ಟಾಕಳೆ ವಿಡಿಯೋ ವೈರಲ್ ಮಾಡಿ ಮೋಸ ಮಾಡಿದ್ದಾನೆಂದು ನವ್ಯಶ್ರಿ ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಆದರೆ ಈ ವರೆಗೆ ಯಾವುದೇ ಕ್ರಮ ಕೈಗೊಳ್ಳದ್ದರಿಂದ ನವ್ಯಶ್ರೀ ರಾಜಕುಮಾರ್ ಟಾಕಳೆಯನ್ನು ಬಂದಿಸುವಂತೆ ಪ್ರತಿಭಟನೆಗೆ ನಿರ್ಧರಿಸಿದ್ದಳು.
ನವ್ಯಶ್ರೀ ಜತೆ ಮದುವೆ ಆದ ಫೋಟೋ ಡಿಲಿಟ್ ಮಾಡಿದ್ನಾ ರಾಜಕುಮಾರ?: ಕಾಂಗ್ರೆಸ್ ಕಾರ್ಯಕರ್ತೆ ನೀಡಿದ ದೂರಿನಲ್ಲೇನಿದೆ?
ಪ್ರತಿಭಟನೆ ನಡೆಸುವ ಉದ್ದೇಶ ತಿಳಿದ ಪೊಲೀಸ್ ಮುನ್ನೆಚ್ಚರಿಕೆ ಕ್ರಮವಾಗಿ ನವ್ಯಶ್ರೀ ರಾವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನವ್ಯಶ್ರೀ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.