* ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ಪ್ರವಾಸ
* ಬೆಳಗಾವಿ ಭೇಟಿ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ
* ಸಿಎಂ ಸಭೆಯಿಂದ ದೂರ ಉಳಿದ ಬಿಜೆಪಿ ಶಾಸಕರು
ಬೆಳಗಾವಿ, (ಆ.21): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿ ಭೇಟಿ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಇರುವುದು ಮತ್ತೊಮ್ಮೆ ಸಾಬೀತಾಗಿದೆ.
undefined
ಇಂದು (ಆ.21) ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ಗೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾದ ಅಭಯ ಪಾಟೀಲ್ ಹಾಗೂ ಅನಿಲ ಬೆನಕೆ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬರಮಾಡಿಕೊಂಡರು.
ಜಾರಕಿಹೊಳಿ ಕುಟುಂಬಕ್ಕೆ ತಪ್ಪಿದ ಮಂತ್ರಿಸ್ಥಾನ
ಆದ್ರೆ, ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಸಿಎಂ ಸಭೆಗೆ ಗೈರಾಗುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಸುವರ್ಣಸೌಧದ ಹೆಲಿಪ್ಯಾಡ್‌ಗೆ ಆಗಮಿಸಿದರೂ ಸಿಎಂ ಕರೆದ ಸಭೆಗೆ ಬಾರದೇ ಇರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಅಭಯ್ ಪಾಟೀಲ್ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಆದ್ರೆ, ಬೊಮ್ಮಾಯಿ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ. ಇದರಿಂದ ಅವರು ಪರೋಕ್ಷವಾಗಿ ತಮ್ಮ ಅಮಸಾಧಾನ ತೋರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಕರೆದ ಸಭೆಗೆ ಜಾರಕಿಹೊಳಿ ಬ್ರದರ್ಸ್ ಸಹ ಗೈರು ಹಾಜರಾಗಿರುವುದು ಬಸವರಾಜ ಬೊಮ್ಮಾಯಿಗೆ ಇರುಸು ಮುರುಸು ಉಂಟಾಗಿದೆ. ಯಾಕಂದ್ರೆ ಸಭೆಗೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹಾಜರಾಗಿದ್ದು, ಸ್ವಪಕ್ಷದ ಶಾಸಕರುಗಳೇ ಗೈರಾಗಿರುವುದು ಕುತೂಹಲ ಮೂಡಿಸಿದೆ. ಅಲ್ಲದೇ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.