ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್ ಶಾಕ್ - ಕೋರ್ಟ್‌ನಿಂದ ಸಮನ್ಸ್..!

Published : Jul 21, 2026, 01:45 PM IST
mohammed nalapad and priyank kharge

ಸಾರಾಂಶ

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಬ್ಬರಿಗೂ ಮತ್ತೆ ಸಮನ್ಸ್ ಜಾರಿಗೊಳಿಸಿ ಆದೇಶಿಸಿದೆ.

ಆಗಸ್ಟ್ 1ರಂದು ಖುದ್ದಾಗಿ ಹಾಜರಾಗಲು ಆದೇಶ

ಬೆಂಗಳೂರಿನ 42ನೇ ಎಸಿಜೆಎಂ (ACJM) ಕೋರ್ಟ್ ಈ ಆದೇಶ ನೀಡಿದ್ದು, ಆಗಸ್ಟ್ 1ರಂದು ಸಚಿವ ಪ್ರಿಯಾಂಕ್ ಖರ್ಗೆ (A1) ಮತ್ತು ಮೊಹಮ್ಮದ್ ನಲಪಾಡ್ (A3) ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಈ ಸಮನ್ಸ್ ಜಾರಿಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಸಮನ್ಸ್ ಜಾರಿ ಮಾಡಿದ ಕುರಿತು ಪೊಲೀಸರು ನೀಡಿದ್ದ ಮಾಹಿತಿಯನ್ನು ನ್ಯಾಯಾಲಯವು ಒಪ್ಪಿಲ್ಲ. ಮತ್ತೊಮ್ಮೆ ಇಬ್ಬರಿಗೂ ಹೊಸದಾಗಿ ಸಮನ್ಸ್ ನೀಡುವಂತೆ ಸೂಚಿಸಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಗೌಡ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಪುರಸ್ಕರಿಸಿದ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.

ಪ್ರಕರಣದ ಹಿನ್ನೆಲೆ ಏನು?

ವರದಿಗಳ ಪ್ರಕಾರ, ಅಕ್ಟೋಬರ್ 14, 2023 ರಂದು (ದೂರಿನನ್ವಯ) ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎಂಬ ಆರೋಪವಿದೆ. ಇನ್ನು ಮೊಹಮ್ಮದ್ ನಲಪಾಡ್ ಅವರು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸಂಘದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ದೂರಲಾಗಿತ್ತು.

 ಈ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ಘನತೆಗೆ ಧಕ್ಕೆ ತಂದಿವೆ ಎಂದು ಬೆಂಗಳೂರಿನ ಸಿದ್ದಾಪುರದ ನಿವಾಸಿ ಎ. ತೇಜಸ್ ಗೌಡ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಗ ವಿಚಾರಣೆಗೆ ಹಾಜರಾಗಲು ಗಡುವು ನೀಡಿದೆ. ಆಗಸ್ಟ್ 1ರಂದು ನಡೆಯಲಿರುವ ವಿಚಾರಣೆಯ ಸಂದರ್ಭದಲ್ಲಿ ಸಚಿವರು ಮತ್ತು ನಲಪಾಡ್ ನ್ಯಾಯಾಲಯಕ್ಕೆ ಹಾಜರಾಗುತ್ತಾರಾ ಅಥವಾ ಕಾನೂನು ಹೋರಾಟದ ಮೂಲಕ ವಿನಾಯಿತಿ ಪಡೆಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಗಳು ಪ್ರಿಯಾಂಕಾ ಹೇಳಿದ್ರೆ ಅದು ರಾಜ್ಯದ ಅಭಿಪ್ರಾಯವಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ
CJP Protest: ಶಿಕ್ಷಣ ಮಂತ್ರಿ ರಾಜೀನಾಮೆ ಪಡೆಯಲಾದ ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ -ಸಿದ್ದರಾಮಯ್ಯ ಕಿಡಿ