ಬೆಂಗ್ಳೂರು ಗ್ರಾಮಾಂತರ ಪ್ರದೇಶ ಗ್ರೇಟರ್‌ ಬೆಂಗಳೂರಿಗಿಲ್ಲ: ಡಿ.ಕೆ.ಶಿವಕುಮಾರ್

Published : Jul 24, 2024, 09:15 AM IST
ಬೆಂಗ್ಳೂರು ಗ್ರಾಮಾಂತರ ಪ್ರದೇಶ ಗ್ರೇಟರ್‌ ಬೆಂಗಳೂರಿಗಿಲ್ಲ: ಡಿ.ಕೆ.ಶಿವಕುಮಾರ್

ಸಾರಾಂಶ

ಉದ್ದೇಶಿತ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ಪ್ರದೇಶವನ್ನು ಸೇರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. 

ವಿಧಾನಸಭೆ (ಜು.24): ಉದ್ದೇಶಿತ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ಪ್ರದೇಶವನ್ನು ಸೇರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಧೀರಜ್ ಮುನಿರಾಜು ಪ್ರಶ್ನೆಗೆ ಉತ್ತರಿಸಿದ ಅವರು, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ, ಮಾಗಡಿ, ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಬೆಂಗಳೂರಿನ ಮೇಲೆ ಒತ್ತಡ ತಗ್ಗಿಸಲು ಉಪನಗರಗಳ ಅಭಿವೃದ್ಧಿ ಮಾಡಲಾಗುವುದು. ಈ ವಿಚಾರ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಇದೇ ತಿಂಗಳು 26ರಂದು ಆರ್ಥಿಕ ಇಲಾಖೆ ತಾತ್ವಿಕ ಅನುಮೋದನೆ ನೀಡಿದೆ. 

ಯೋಜನೆಯ ಬಗ್ಗೆ ಸಾಂಖ್ಯಿಕ ಇಲಾಖೆಯ ಸಹಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಹೊರವಲಯದಲ್ಲಿನ 110 ಹಳ್ಳಿಗಳನ್ನು ಈಗಾಗಲೇ ಸೇರಿಸಲಾಗಿದೆ. ಸದ್ಯಕ್ಕೆ ಹೊರ ವಲಯದ ಯಾವುದೇ ನಗರಗಳನ್ನು ಹೊಸ ಸೇರ್ಪಡೆ ಮಾಡುವುದಿಲ್ಲ ಎಂದರು. ಈ ವೇಳೆ ಧೀರಜ್‌ ಮುನಿರಾಜು, ದೊಡ್ಡಬಳ್ಳಾಪುರ ಕೈಗಾರಿಕಾ ವಲಯವು ವೇಗವಾಗಿ ಬೆಳೆಯುತ್ತಿದ್ದು, ಅಭಿವೃದ್ಧಿಯ ವೇಗಕ್ಕೆ ತಕ್ಕಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು ಎಂದು ಮನವಿ ಮಾಡಿದರು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಒಪ್ಪಿಗೆ: ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಪ್ರದೇಶಗಳನ್ನು ಸೇರಿಸಿ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಇದರಡಿ ಹತ್ತರವರೆಗೆ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮೇಯರ್‌ ಹಾಗೂ ಉಪ ಮೇಯರ್‌ ಅವಧಿಯನ್ನು 5 ವರ್ಷಕ್ಕೆ ಹೆಚ್ಚಳ ಸೇರಿದಂತೆ ಹಲವು ಮಹತ್ವದ ಅಂಶಗಳುಳ್ಳ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕವನ್ನು ಮಂಗಳವಾರವೇ ವಿಧಾನಸಭೆಯಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ.

ಮಾಜಿ ಸಿಎಂಗಳಾದ ಬಿಎಸ್‌ವೈ, ಬೊಮ್ಮಾಯಿ ಇದ್ದಾಗ ₹300 ಕೋಟಿ ಅಕ್ರಮ: ಡಿ.ಕೆ.ಶಿವಕುಮಾರ್‌

ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ (ಎಲೆಕ್ಟ್ರಾನಿಕ್‌ ಸಿಟಿ, ಬಿಡದಿ, ಆನೇಕಲ್‌ ಸೇರಿ) ಎರಡೂ ಜಿಲ್ಲೆ ಹಾಗೂ ಸುತ್ತಮುತ್ತ ಪ್ರದೇಶಗಳನ್ನು ಸೇರಿಸಿ ಗ್ರೇಟರ್‌ ಬೆಂಗಳೂರು ರಚಿಸಲು ತೀರ್ಮಾನಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ