Bengaluru Stampede Case: ಎನ್‌ಎಚ್‌ಆರ್‌ಸಿ ಮಧ್ಯಪ್ರವೇಶಕ್ಕೆ ಆರ್‌.ಅಶೋಕ್‌ ಮನವಿ

Kannadaprabha News   | Kannada Prabha
Published : Jun 13, 2025, 05:29 AM ISTUpdated : Jun 13, 2025, 09:45 AM IST
Karnataka LoP R Ashoka

ಸಾರಾಂಶ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯೆ ಪ್ರವೇಶಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಮನವಿ ಮಾಡಿದ್ದಾರೆ.

ಬೆಂಗಳೂರು (ಜೂ.13): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯೆ ಪ್ರವೇಶಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಮನವಿ ಮಾಡಿದ್ದಾರೆ. ಈ ಕುರಿತು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡುಬಂದಿದೆ ಎಂದು ದೂರಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 35 ಸಾವಿರ ಜನರಿಗೆ ಆಸನ ವ್ಯವಸ್ಥೆಯಿದೆ. ಆದರೆ ಉಚಿತ ಪಾಸ್‌ ಹಾಗೂ ತಪ್ಪಾದ ಘೋಷಣೆ, ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನ ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್‌ ಕಾರ್ಯಕ್ರಮದಲ್ಲಿ ಪೊಲೀಸ್‌ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆ್ಯಂಬುಲೆನ್ಸ್‌, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ತಪ್ಪಿನಲ್ಲಿ ಆರ್‌ಸಿಬಿ, ಡಿಎನ್‌ಎ ಹಾಗೂ ಕ್ರಿಕೆಟ್‌ ಅಸೋಸಿಯೇಶನ್‌ನ ಪಾತ್ರವೂ ಇದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಸ್ವಯಂಪ್ರೇರಿತ ತನಿಖೆ ನಡೆಸಿ: ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಹೆಚ್ಚಿನವರು ಯುವಜನರೇ ಆಗಿದ್ದು, ಅವರ ಸುರಕ್ಷತೆ ಹಾಗೂ ಬದುಕುವ ಹಕ್ಕು ಕಿತ್ತುಕೊಂಡಂತಾಗಿದೆ. ಆದ್ದರಿಂದ ಈ ದುರಂತ ಕುರಿತು ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಬೇಕು ಎಂದು ಆರ್‌.ಅಶೋಕ ಮನವಿ ಮಾಡಿದ್ದಾರೆ. ಇದು ನಿಜಕ್ಕೂ ತಡೆಯಬಹುದಾದ ದುರಂತರವಾಗಿತ್ತು. ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯಪ್ರವೇಶದಿಂದಾಗಿ ನೊಂದ ಕುಟುಂಬಗಳಿಗೆ ನ್ಯಾಯ ಸಿಗುವ ಜೊತೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬಹುದು ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಡೀಸಿ ಮುಂದೆ ಹೇಳಿಕೆ ದಾಖಲು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾ ಮ್ಯಾಜಿಸ್ಟೇಟ್‌ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಬುಧವಾರ 10ಕ್ಕೂ ಹೆಚ್ಚಿನ ಗಾಯಾಳುಗಳಿಂದ ಹೇಳಿಕೆ ದಾಖಲಿಸಿಕೊಂಡರು. ಹೇಳಿಕೆ ನೀಡುವ ಕುರಿತು ಈಗಾಗಲೇ 55 ಗಾಯಾಳುಗಳಿಗೆ ನೋಟಿಸ್‌ ನೀಡಲಾಗಿದ್ದು, ಅದರಲ್ಲಿ ಬುಧವಾರ ಸುಮಾರು 14 ಮಂದಿ ಕಂದಾಯ ಭವನದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದರು. ವಿಡಿಯೋ ರೆಕಾರ್ಡಿಂಗ್‌ ಮೂಲಕ ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಉಳಿದ ಗಾಯಾಳುಗಳಲ್ಲಿ 10 ಮಂದಿಯ ಹೇಳಿಕೆಯನ್ನು ಈಗಾಗಲೇ ಆಸ್ಪತ್ರೆಯಲ್ಲೇ ದಾಖಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ