
ಬೀದರ್, (ಜು.20): ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಮತ್ತೆ ಇತಿಹಾಸ ಮರುಕಳಿಸಲಿದೆ. ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಎಚ್ಚರಿಸಿದ್ದಾರೆ.
ನಾಯಕತ್ವ ಬದಲಾವಣೆ ಅಪ್ರಸ್ತುತ. ಯಡಿಯೂರಪ್ಪ ಅವರನ್ನು ಕಡೆಗಣಿಸಿದರೆ ಪಕ್ಷಕ್ಕೆ ದೊಡ್ಡ ನಷ್ಟವಾಗಲಿದೆ. ಲಿಂಗಾಯತ ಸಮುದಾಯ ಬಿಜೆಪಿಯಿಂದ ದೂರ ಸರಿಯಲಿದೆ. ಅವಧಿ ಮುಗಿಯುವ ವರೆಗೂ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು
ಯಡಿಯೂರಪ್ಪ ಅವರು ಜನಪರ-ಜೀವಪರ ಆಡಳಿತ ನಡೆಸುತ್ತಿದ್ದಾರೆ. ಜಾತ್ಯತೀತವಾಗಿ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ನೂತನ ಅನುಭವ ಮಂಟಪ ಸೇರಿದಂತೆ ಅನೇಕ ಕೊಡುಗೆ ನೀಡಿದ್ದಾರೆ ಎಂದರು.
ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತಂದಿದ್ದಾರೆ. ಜನ ಬೆಂಬಲದ ಜತೆಗೆ ಪಕ್ಷಾತೀತವಾಗಿ ಅನೇಕ ನಾಯಕರ ಬೆಂಬಲವೂ ಅವರಿಗೆ ಇದೆ. ಆದರೂ ಸ್ವಪಕ್ಷದ ಕೆಲ ನಾಯಕರು ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಸಿರುವುದು ಸರಿಯಲ್ಲ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.