ಭಾಲ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಮಗನಿಂದ ದುಡ್ಡು ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ.
ಬೀದರ್ (ಮೇ.6): ಭಾಲ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಮಗನಿಂದ ದುಡ್ಡು ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರಕಾಶ್ ಖಂಡ್ರೆ ಮಗ ಗುರುಪ್ರಸಾದ್, ಸೊಸೆಯಿಂದ ಮತದಾರರಿಗೆ ಹಣ ಹಂಚಿಕೆ. ದುಡ್ಡು ಕೊಟ್ಟು ಕಮಲ ಚಿನ್ಹೆಗೆ ಮತ ಹಾಕುವಂತೆ ಆಣೆ-ಪ್ರಮಾಣ ಮಾಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ದುಡ್ಡು ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ.
ಯಾದಗಿರಿ ಜೆಡಿಎಸ್ ಅಭ್ಯರ್ಥಿಯಿಂದ ಹಣ ಚಿಕೆ ಹಂಆರೋಪ: ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ ಎಪಿಎಂಸಿ ಯಾರ್ಡ್ ನಲ್ಲಿರುವ ತಮ್ಮ ಅಂಗಡಿಯಲ್ಲಿ ಹಣ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ ಚುನಾವಣಾ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.
undefined
ಮತದಾರರನ್ನ ಸೇರಿಸಿ ಹಣ ಹಂಚಲಾಗುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಲಲಿತಾ ಅನಪುರ ಅವರಿಂದ ದೂರು ದಾಖಲಾಗಿತ್ತು. ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪ್ಯಾರಾ ಮಿಲಿಟರಿ ಪೋರ್ಸ್ ಹಾಗೂ ಪೊಲೀಸರು ಸ್ಥಳದಲ್ಲೇ ಇದ್ದ ಜನರನ್ನು ವಿಚಾರಣೆ ನಡೆಸಿದರು. ಅಂಗಡಿಯ ಪ್ರತಿಯೊಂದು ಕೋಣೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಯಾವುದೇ ಹಣ ಪತ್ತೆಯಾಗದ ಕಾರಣ ಅಧಿಕಾರಿಗಳು ವಾಪಸ್ ಹೋದರು ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮತಯಾಚನೆ:
ಶಿವಮೊಗ್ಗ ನಗರದ ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಬಳಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮತಯಾಚನೆ ಮಾಡಿದ್ದಾರೆ. ಮಹಾನಗರ ಪಾಲಿಕೆಯ ಸ್ವಚ್ಛತ ವಾಹನಗಳ ಡ್ರೈವರ್ಸ್ ಮತ್ತು ಲೋಡರ್ಸ್ ಜೊತೆ ಚರ್ಚೆ ನಡೆಸಿದ ಜೆಡಿಎಸ್ ಅಭ್ಯರ್ಥಿ ಅಯನೂರು ಮಂಜುನಾಥ್ ಪೌರಕಾರ್ಮಿಕರ ವೇತನ ಪರೀಕ್ಷೆ ಕರಣೆ ಸಮಾನ ವೇತನ ವೈದ್ಯಕೀಯ ಸೌಲಭ್ಯ ಮೊದಲಾದವುಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿದ್ದ ಮಾಹಿತಿ ನೀಡಿದರು.
ಚಿತ್ರದುರ್ಗದಲ್ಲಿ ಸೌಭಾಗ್ಯ ನಿವೃತ್ತಿ ಕಾಂಗ್ರೆಸ್‌ಗೆ ಲಾಭ ಆಗುತ್ತಾ?: ತಿಪ್ಪಾರೆಡ್ಡಿ ಗೆಲುವಿನ ಓಟಕ್ಕೆ
ಇನ್ನೂ ಒಂದುವರೆ ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇದ್ದರೂ ಕಾನೂನು ಕಾಯ್ದೆ ರೂಪಿಸುವ ವಿಧಾನಸಭೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುವ ಅಪೇಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಮಿಕರ ಧನಿಯಾಗಿ ವಿಧಾನಸಭೆಯಲ್ಲಿ ಕೆಲಸ ಮಾಡಲು ತಮ್ಮನ್ನು ಬೆಂಬಲಿಸುವಂತೆ ಕೋರಿದರು.
ಬೆಂಗಳೂರಿನಲ್ಲಿ ಮೋದಿ ಮೆಘಾ ರೋಡ್ ಶೋ , ಭಜರಂಗಿ ಮುಖವಾಡ ಧರಿಸಿದ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.