ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿ.ಕೆ. ಶಿವಕುಮಾರ್

By Sathish Kumar KHFirst Published Jan 30, 2023, 1:11 PM IST
Highlights

ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಭಾರತ ಜೋಡೋ ಯಾತ್ರೆ ಸಂಪೂರ್ಣವಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಹೋಗಿರುವ ಡಿ.ಕೆ. ಶಿವಕುಮಾರ್ ಕಾಶ್ಮೀರದ ಹಿಮಸೌಂದರ್ಯಕ್ಕೆ ಮನಸೋತು ವೀಡಿಯೋ ಹಂಚಿಕೊಂಡಿದ್ದಾರೆ.

ಶ್ರೀನಗರ (ಜ.30): ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ ಜೋಡೋ ಯಾತ್ರೆ ಸೋಮವಾರ ಸಂಪೂರ್ಣವಾಗುತ್ತಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಹೋಗಿರುವ ಡಿ.ಕೆ. ಶಿವಕುಮಾರ್ ಕಾಶ್ಮೀರದ ಹಿಮಸೌಂದರ್ಯಕ್ಕೆ ಮನಸೋತು ವೀಡಿಯೋ ಹಂಚಿಕೊಂಡಿದ್ದಾರೆ.

ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3570 ಕಿ.ಮೀ. ಸಾಗಿದ ಈ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ. ಹೊಸ ಮೈಲುಗಲ್ಲು ಸೃಷ್ಟಿಸಿದೆ. ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ, ಷಡ್ಯಂತ್ರ, ಅಪಪ್ರಚಾರ ಸೇರಿದಂತೆ ಎಲ್ಲ ಅಡೆತಡೆಗಳನ್ನು ಮೀರಿ ಯಾತ್ರೆ ತನ್ನ ಗುರಿ ತಲುಪಿದೆ. ಇದು ಕಾಂಗ್ರೆಸ್ ಹಾಗೂ ಪಕ್ಷದ ನಾಯಕರಿಗೆ ದೇಶದ ಬಗ್ಗೆ ಇರುವ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ. 

ನಾಳೆ ಅಂತಿಮ ದಿನದ ಭಾರತ್ ಜೋಡೋ ಯಾತ್ರೆ : ಟಿಎಂಸಿ, ಎಸ್‌ಪಿ, ಟಿಡಿಪಿ ಸೇರಿ 9 ಪಕ್ಷಗಳ ಗೈರು..!

ಕಾಶ್ಮೀರದಲ್ಲಿ ಇಂದು ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು,  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. ಕಾಶ್ಮೀರದ ಶ್ರೀನಗರಕ್ಕೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್‌ ಕಾಶ್ಮೀರದ ಹಿಮಪಾತ, ಪ್ರಕೃತಿ ಸೌಂದರ್ಯ ಹಾಗೂ ಭಾರತ್‌ ಜೋಡೋ ಯಾತ್ರೆಯ ಕುರಿತ ಪಾದಯಾತ್ರೆಯ ದಾಖಲೆಯ ಬಗ್ಗೆ ಸ್ವತಃ ವೀಡಿಯೋ ಮಾಡಿ ಹಂಚಿಕೊಂಡಿದ್ದಾರೆ.

ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರ ಯಾತ್ರೆ ಯಶಸ್ವಿ: 'ಭಾರತ ಜೋಡೋ ಯಾತ್ರೆ ಅಂತಿಮ ದಿನ ನಾವೆಲ್ಲ ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದೇವೆ. ದೇಶವನ್ನು ಒಗ್ಗೂಡಿಸಿ, ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರು ಈ ಯಾತ್ರೆ ಆರಂಭಿಸಿದ್ದು, ಇಂದು ಯಾತ್ರೆಯ ಅಂತಿಮ ದಿನವಾಗಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಸುಮಾರು 100 ಸಂಸದರು, ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ ಎಂದು ಮಾಹಿತಿಯನ್ನು ನೀಡಿದರು.

ಅಲ್ಲಿನ ಹಿಮದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಡಿಕೆಶಿ: ಭಾರತ್‌ ಜೋಡೋ ಯಾತ್ರೆ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದ್ದು, ಇಡೀ ಪ್ರದೇಶ ಹಿಮದಿಂದ ತುಂಬಿದೆ. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ ಸಂತಸ ಹಂಚಿಕೊಂಡಿದ್ದಾರೆ.

ನಾನು ಡಿಕೆಶಿ ಅಣ್ಣ ತಮ್ಮಂದಿರಂತೆ ಇದ್ದೆವು- ಗ್ರಾಮೀಣ ಶಾಸಕಿ ಸಂಬಂಧ ಹಾಳು ಮಾಡಿದಳು: ರಮೇಶ್‌ ಜಾರಕಿಹೊಳಿ

ಕಾಶ್ಮೀರ ದೇಶದ ಆಸ್ತಿಯಾಗಿದೆ: ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ. ಅವರಿಗೆ ಧನ್ಯವಾದಗಳು' ಎಂದು ಶಿವಕುಮಾರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

click me!