
ಮೈಸೂರು (ಸೆ.6) : ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ನಡೆಸುವ ಭಾರತ್ ಜೋಡೋ ಪಾದಯಾತ್ರೆ ಐತಿಹಾಸಿಕ ನಡಿಗೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಸೆ.7 ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಾನು ಭಾಗವಹಿಸಲಿದ್ದೇನೆ. ದೇಶಾದ್ಯಂತ 3570 ಕಿ.ಮೀ. ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 510 ಕಿ.ಮೀ. ಯಾತ್ರೆ ಸಾಗಲಿದೆ ಎಂದು ಹೇಳಿದರು.
ಸೆ.30 ರಂದು ಗುಂಡ್ಲುಪೇಟೆ(Gundlupete) ಮೂಲಕ ಪಾದಯಾತ್ರೆ(Hike) ರಾಜ್ಯ ಪ್ರವೇಶಿಸಲಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ(Rahul Gandhi)ಯವರಿಗೆ ಅದ್ಧೂರಿ ಸ್ವಾಗತ ಕೋರಲು ನಿರ್ಧರಿಸಿದೆ. ಚಾಮರಾಜನಗರ ಹಾಗೂ ಮೈಸೂರು(Mysuru) ಜಿಲ್ಲೆಯಲ್ಲಿ ಪಾದಯಾತ್ರೆ ಯಶಸ್ವಿಗೊಳಿಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಉಭಯ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆ ನೆನಪಿನಲ್ಲಿ ಉಳಿಯುವಂತಿರಬೇಕು. ಇದರ ಜವಾಬ್ದಾರಿಯನ್ನು ಎರಡೂ ಜಿಲ್ಲೆಯ ಮುಖಂಡರು ವಹಿಸಿಕೊಳ್ಳಬೇಕು. ಯಾವುದೇ ರಾಜಕೀಯ ಪಕ್ಷಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಬೇಕು. ಮತ್ತೊಂದು ಪಕ್ಷದ ವಿನಾಶಕ್ಕೆ ಮುಂದಾಗಬಾರದು. ಬೇರೆ ಬೇರೆ ಪಕ್ಷಗಳು ಈ ವ್ಯವಸ್ಥೆಯಲ್ಲಿ ಇರಬೇಕು ಎಂಬ ಮನೋಭಾವ ಹೊಂದಿರಬೇಕು. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ ಎಂದು ಅವರು ಕಿಡಿಕಾರಿದರು.
ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ, ಬೆಲೆ ಏರಿಕೆ ನಿಯಂತ್ರಣ, ದೇಶದಲ್ಲಿ ಶಾಂತಿ, ಸಾಮರಸ್ಯದ ವಾತಾವರಣ ನಿರ್ಮಾಣ, ದೇಶದ ಜನರ ಹಸಿವು ನೀಗಿಸುವ ಅನ್ನದಾತರ ಬದುಕು ಭದ್ರಪಡಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ರಾಹುಲ್ ಗಾಂಧಿ ಅವರನ್ನು ಹಮ್ಮಿಕೊಂಡಿದ್ದಾರೆ ಎಂದರು. ಕೆಪಿಸಿಸಿ(KPCC) ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್(Dhruva Narayana) ಮಾತನಾಡಿ, ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ನಾನಾ ವರ್ಗದವರೊಂದಿಗೆ ಸಂವಾದ ನಡೆಸಲಿದ್ದಾರೆ. ಪಾದಯಾತ್ರೆಯನ್ನು ಅರ್ಥಪೂರ್ಣಗೊಳಿಸುವುದು ಇದರ ಉದ್ದೇಶ ಎಂದರು.
ಶಾಸಕರಾದ ತನ್ವೀರ್ ಸೇಠ್(Tanveer Seth), ಪುಟ್ಟರಂಗಶೆಟ್ಟಿ(Puttaranga shetty), ಡಾ. ಯತೀಂದ್ರ ಸಿದ್ದರಾಮಯ್ಯ(Yatindra siddaramaiah), ಆರ್. ನರೇಂದ್ರ, ಎಚ್.ಪಿ. ಮಂಜುನಾಥ್, ಡಾ. ತಿಮ್ಮಯ್ಯ, ಮಧು ಮಾದೇಗೌಡ, ರಾಜ್ಯ ಉಸ್ತುವಾರಿಯಾದ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕಾಂಗ್ರೆಸ್ ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಚಾಮರಾಜನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಮೈಸೂರು ನಗರಾಧ್ಯಕ್ಷ ಆರ್. ಮೂರ್ತಿ, ಮಾಜಿ ಶಾಸಕರಾದ ಕೆ. ವೆಂಕಟೇಶ್, ಎಸ್. ಬಾಲರಾಜ್, ವಾಸು, ಆರ್. ಧರ್ಮಸೇನ ಮೊದಲಾದವರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.