ಬಿಜೆಪಿ ಸಂಸದ ಹಾಗೂ ಮಾಜಿ ಸಚಿವ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅವರ ಮುಂದಿನ ನಡೆ ಭಾರೀ ಕುತೂಹಲ ಮೂಡಿಸಿದೆ.
ಅಹಮದಾಬಾದ್, (ಡಿ.29): ಬಿಜೆಪಿ ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಮನ್ಸೂಖ್ ವಾಸವ ಅವರು ಭಾರತೀಯ ಜನತಾ ಪಕ್ಷವನ್ನು ತೊರೆದಿದ್ದಾರೆ.
ಗುಜರಾತಿನ ಭರೂಚ್ ಲೋಕಸಭೆ ಕ್ಷೇತ್ರದಿಂದ ಗೆದ್ದಿರುವ ಮನ್ಸೂಖ್ ವಾಸವ, ಮುಂಬರುವ ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಸಂಸತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯಕ್ಕೆ ರಜನೀಕಾಂತ್ ಎಂಟ್ರಿ ಇಲ್ಲ, ಕ್ಷಮೆ ಯಾಚಿಸಿದ 'ತಲೈವಾ'!
ಆದ್ರೆ, ಅವರ ಮುಂದಿನ ನಡೆ ಏನೆಂಬುದು ತೀವ್ರ ಕುತೂಹಲ ಮೂಡಿಸಿದೆ. ದಿಢೀರನೆ ರಾಜೀನಾಮೆ ಸಲ್ಲಿಸಿರುವುದು ಬಿಜೆಪಿ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಸಂಬಂಧ ಹಲವು ನಾಯಕರು ಅವರ ಸಂಪರ್ಕ ಪಡೆಯಲು ಪ್ರಯತ್ನಿಸಿದ್ದು , ಅವರ ಮನವೊಲಿಕೆ ಯತ್ನವೂ ಕೂಡ ನಡೆಯುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನ್ಸುಖ್ ವಾಸವಾ , ನಾನು ಇಷ್ಟು ದಿನ ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದೇನೆ. ನಾನು ನಿಭಾಯಿಸಬಲ್ಲದಕ್ಕಿಂತ ಹೆಚ್ಚಿನದನ್ನು ಬಿಜೆಪಿ ನನಗೆ ನೀಡಿದೆ. ಇದಕ್ಕಾಗಿ ನಾನು ಪಕ್ಷ ಮತ್ತು ಪಕ್ಷದ ಕೇಂದ್ರ ಮುಖಂಡರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ತಪ್ಪುಗಳಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಈಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.