ಬೀದರ್ ಗುತ್ತಿಗೆದಾರ ಸಾವು: ಪ್ರಿಯಾಂಕ ಖರ್ಗೆ ಬೆನ್ನಿಗೆ ನಿಂತ ಗೃಹ ಸಚಿವ ಪರಮೇಶ್ವರ

By Sathish Kumar KH  |  First Published Dec 30, 2024, 3:12 PM IST

ಬೀದರ್‌ನ ಗುತ್ತಿಗೆದಾರ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಡೆತ್‌ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿಲ್ಲದ ಕಾರಣ, ರಾಜೀನಾಮೆ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. ಸತ್ಯಾಸತ್ಯತೆ ಹೊರಬರಲು ಸಿಐಡಿ ತನಿಖೆ ನಡೆಸಲಿದೆ.


ಬೆಂಗಳೂರು (ಡಿ.30): ಬೀದರ್‌ನಲ್ಲಿ ಗುತ್ತಿಗೆದಾರ ಸಾವಿನ ನಂತರ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಡೆತ್‌ನೋಟ್‌ನಲ್ಲಿ ಎಲ್ಲಿಯೂ ಪ್ರಿಯಾಂಕ ಖರ್ಗೆ ಹೆಸರು ಉಲ್ಲೇಖವಾಗಿಲ್ಲ. ತನಿಖೆ ಮುಕ್ತಾಯ ಆಗುವವರೆಗೂ ಪ್ರಿಯಾಂಕ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ. ತನಿಖೆಯ ವರದಿ ಬಂದ ನಂತರ ಏನು‌ ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು.

Tap to resize

Latest Videos

ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ.‌ ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲು ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೇ. ಈ ನಿಟ್ಟಿನಲ್ಲಿ ಸಿಐಡಿ ಅವರು ತಮ್ಮ‌ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿಗರ ಹತ್ಯೆಗೆ ಮಹಾರಾಷ್ಟ್ರ ಗೂಂಡಾಗಳಿಗೆ ಸುಪಾರಿ: ಎಂಎಲ್‌ಸಿ ರವಿಕುಮಾರ್‌ ಗಂಭೀರ ಆರೋಪ

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸುವಂತೆ ಸಾರ್ವಜನಿಕರಲ್ಲಿ  ವಿನಂತಿಸಿಕೊಳ್ಳುತ್ತೇನೆ ಎಂದರು.

click me!