
ಬೆಂಗಳೂರು (ಮಾ.02): ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ವೀರಶೈವ ಲಿಂಗಾಯತ ಸಮುದಾಯ ಇದೆ ಎಂಬ ಸಂದೇಶ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಸಮುದಾಯದ ದೊಡ್ಡ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಇದಕ್ಕೆ ಪೂರಕವಾಗಿ ಶುಕ್ರವಾರದಿಂದಲೇ ರಾಜ್ಯಾದ್ಯಂತ ಪೂರ್ವಭಾವಿ ಸಭೆಗಳನ್ನು ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ.
ಯಡಿಯೂರಪ್ಪ ನಿವಾಸದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು, ನಿವೃತ್ತ ಅಧಿಕಾರಿಗಳು, ಯುವ ಮುಖಂಡರು ಸೇರಿ ಸಭೆ ಮಾಡಿದ್ದೇವೆ ಎಂದರು. ಇಂದಿನಿಂದ ಪೂರ್ವಭಾವಿ ಸಭೆ, ಸಮುದಾಯದ ಅಗ್ರಗಣ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈಜಯೇಂದ್ರರನ್ನು ಬೆಂಬಲಿಸಿ ಮುಂದಿನ ದಿನಗಳಲ್ಲಿ ಬೃಹತ್ ಸಮಾವೇಶ ಮಾಡಲು ನಿರ್ಣಯಿಸಲಾಗಿದೆ. ಇದಕ್ಕೂ ಮುನ್ನ ರಾಜ್ಯದ ವಿವಿಧೆಡೆ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಶುಕ್ರವಾರದಿಂದಲೇ ಪೂರ್ವಭಾವಿ ಸಭೆ ಆರಂಭವಾಗಲಿದೆ ಎಂದು ಹೇಳಿದರು.
ವಿವಿಧೆಡೆ ಪೂರ್ವಭಾವಿ ಸಭೆ: ಫೆ.28ರಂದು ಮಧ್ಯಾಹ್ನ 12ಕ್ಕೆ ದಾಬಸ್‌ಪೇಟೆಯಲ್ಲಿ ಸಮುದಾಯ ಮುಖಂಡರ ಸಭೆ ನಡೆಸಲಿದ್ದೇವೆ. ಮಧ್ಯಾಹ್ನ 1ಕ್ಕೆ ತುಮಕೂರಿನ ವೀರಶೈವ ಲಿಂಗಾಯತ ಸಮುದಾಯದ ಭವನದಲ್ಲಿ ಸಭೆ ನಡೆಯಲಿದೆ. ಫೆ.1ರಂದು ದಾವಣಗೆರೆ, ಚಿತ್ರದುರ್ಗ, ಹಾವೇರಿ ಈ ಮೂರು ಜಿಲ್ಲೆಗಳನ್ನು ಸೇರಿ ದಾವಣೆಗೆರೆಯ ಸಮೃದ್ಧಿ ಕನ್ವೆನ್ಷನ್ ಹಾಲ್‌ನಲ್ಲಿ ಮುಖಂಡರ ಸಭೆ ನಡೆಸಲಿದ್ದೇವೆ. ಫೆ.4ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಗಾಯಿತ್ರಿ ಗ್ರ್ಯಾಂಡ್‌ನಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ, ರಾಮ ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಮುಖಂಡರ ಸಭೆ ನಡೆಸಲಿದ್ದೇವೆ. ಇದಕ್ಕೆ ಕೆಲ ಮಠಾಧೀಶರ ಕರೆದಿದ್ದೇವೆ ಎಂದು ರೇಣುಕಾಚಾರ್ಯ ವಿವರಿಸಿದರು.
ನೀವ್ಯಾರೂ ಲಿಂಗಾಯತ ನಾಯಕರಲ್ಲ: ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ತಿರುಗೇಟು
ಸಮುದಾಯದ ಉದ್ಯಮಿಗಳು, ವಕೀಲರು, ಅಧಿಕಾರಿಗಳು, ಮಠಾಧೀಶರು ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಸಮುದಾಯದ ಮುಖಂಡರು ಬೆಳೆದಿದ್ದಾರೆ. ಎಲ್ಲರ ಮೇಲೂ ಯಡಿಯೂರಪ್ಪ ಅವರ ಋಣ ಇದೆ. ಹೀಗಾಗಿ ಎಲ್ಲರೂ ಸ್ವಯಂ ಪ್ರೇರಣೆಯಿಂದ ಈ ಸಭೆಗಳಿಗೆ ಬರಬೇಕು.
-ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.