
ಬೆಂಗಳೂರು (ಏ.06): ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದ್ದು, ಸುಮಾರು 15 ದಿನ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ಸುದೀಪ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಸುದೀಪ್ ಅವರ ನಿರ್ಣಯವನ್ನು ಹೃದಯ ಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿದರು. ಸುದೀಪ್ ಅವರು ಜನಪ್ರಿಯ ನಟರಾಗಿರುವುದರಿಂದ ಅವರ ಪ್ರಚಾರವನ್ನು ಸೂಕ್ತವಾಗಿ ಆಯೋಜಿಸಲಾಗುವುದು. ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ಸುದೀಪ್ ಅವರಿಗೆ ದೇಶದ ಹಾಗೂ ಕರ್ನಾಟಕದ ಬಗ್ಗೆ ಅವರದ್ದೇ ಆದ ವಿಚಾರಧಾರೆಗಳಿವೆ. ಅವುಗಳನ್ನು ಮುಂದೆ ಪ್ರಚಾರದಲ್ಲಿ ತಿಳಿಸುತ್ತಾರೆ ಎಂದರು.
‘ನಮ್ಮ ವೈಯಕ್ತಿಕ ಸಂಬಂಧದಿಂದ ಸುದೀಪ್ ಅವರು ನಿರ್ಣಯ ತೆಗೆದುಕೊಂಡಿದ್ದಾರೆ. ನಾನು ಸೂಚಿಸುವಲ್ಲಿ ಪ್ರಚಾರ ಮಾಡುತ್ತಾರೆ. ಬಿಜೆಪಿ ಪರವಾಗಿಯೂ ಅವರು ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ. ತಮ್ಮ ಸಮಯ, ಗೌರವವನ್ನು ಗಮನದಲ್ಲಿಟ್ಟುಕೊಂಡು ಸುದೀಪ್ ಅವರು ಪ್ರಚಾರಕ್ಕೆ ನಿಂತಿರುವುದು ಕರ್ನಾಟಕದಲ್ಲಿ ವಿದ್ಯುತ್ ಸಂಚಲನವಾದಂತಾಗಿದೆ. ವಿಶೇಷವಾಗಿ ಯುವಕರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಅವರ ಬೆಂಬಲವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದರು.
ಸುದೀಪ್ ರಾಜಕೀಯ ಪ್ರವೇಶ ಇಲ್ಲ: ಬಿಜೆಪಿಯ ಪರ ಪ್ರಚಾರ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಸುದೀಪ್ ನನ್ನ ಪರವಾಗಿದ್ದಾರೆ. ನಾನು ಬಿಜೆಪಿಯಲ್ಲಿದ್ದೇನೆ. ಸುದೀಪ್ ಅವರು ನಾನು ಹೇಳಿದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ. ಅವರ ಪ್ರಚಾರಕ್ಕೆ ಸಂಬಂಧಿಸಿದಂತೆ ರೂಪುರೇಷೆ ಸಿದ್ಧಪಡಿಸಿ ವಿಶೇಷ ಪ್ಲ್ಯಾನ್ ರೂಪಿಸುತ್ತೇವೆ. ಸುಮಾರು 15 ದಿನ ಪ್ರಚಾರದಲ್ಲಿ ಇರುತ್ತಾರೆ. ನಮ್ಮ ಪಕ್ಷದ ಪರವಾಗಿಯೇ ಇರುತ್ತಾರೆ’ ಎಂದು ಮಾಹಿತಿ ನೀಡಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಸುದೀಪ್ ಸಿನಿಮಾ, ಜಾಹೀರಾತು ನಿರ್ಬಂಧಕ್ಕೆ ಮನವಿ: ನಟ ಸುದೀಪ್ ಬಿಜೆಪಿಯ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಿತ್ರಗಳು ಚಿತ್ರಮಂದಿರದಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ ಕ್ರಮ ಜರುಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ ಎಂಬುವವರು ದೂರು ನೀಡಿದ್ದಾರೆ.
ಡಿ.ಕೆ.ಶಿವಕುಮಾರ್‌ಗೆ ಸಿಎಂ ಹುದ್ದೆ ಕೊಡಲ್ಲ ಎಂದಿಲ್ಲ: ಸಿದ್ದರಾಮಯ್ಯ
ನೀತಿ ಸಂಹಿತೆ ಅನುಸಾರ ಸುದೀಪ್ ಅವರ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೆ ತಡೆ ಹಿಡಿಯುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ರಾಜಕೀಯ ಪಕ್ಷವೊಂದರ ಪರವಾಗಿ ಪ್ರಚಾರ ಮಾಡುತ್ತಿರುವುದನ್ನು ಅವರೇ ಘೋಷಣೆ ಮಾಡಿದ್ದಾರೆ. ಹೀಗಾಗಿ ಅವರ ನಟನೆಯ ಚಲನಚಿತ್ರಗಳ, ಟಿ.ವಿ ಶೋ, ಜಾಹೀರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆ ಸ್ಪಷ್ಟಉಲ್ಲಂಘನೆಯಾಗಲಿದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.