ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಡ್ರೈವರ್ ಕಾರ್ತಿಕ್ ಸ್ಪೋಟಕ ಮಾಹಿತಿ

By Sathish Kumar KH  |  First Published Apr 30, 2024, 1:26 PM IST

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಿಡಿದು ನ್ಯಾಯ ಕೊಡಿಸಿ ಎಂದು ಕೇಳಿದರೆ ಅವರೇ ವಿಡಿಯೋ ಲೀಕ್ ಮಾಡಿದ್ದಾರೆ ಎಂದು ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.


ಬೆಂಗಳೂರು (ಏ.30): ಪ್ರಜ್ವಲ್ ರೇವಣ್ಣ ಅವರ ಬಳಿ ಕಳೆದ ಏಳೆಂಟು ವರ್ಷಗಳಿಂದ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆನು. ಸಂಸದರ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಹಿಡಿದುಕೊಂಡು ನ್ಯಾಯ ಕೇಳುವುದಕ್ಕೆ ಹೋದರೆ ವಕೀಲ ದೇವರಾಜೇಗೌಡ ಅವರೇ ಪೆನ್‌ಡ್ರೈವ್ ಲೀಕ್ ಮಾಡಿದ್ದಾರೆ ಎಂದು ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ನನಗೆ ಹಿಂಸೆ ಕೊಟ್ಟು, ಹಲ್ಲೆ ಮಾಡಿದರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದು ಹೇಳಿದರು.

Tap to resize

Latest Videos

ಕೇಂದ್ರ ಸರ್ಕಾರ ತಲುಪಿದ ಪ್ರಜ್ವಲ್ ರೇವಣ್ಣ ಕಾಮಕಾಂಡ; ಮಹಿಳೆಯರ ಅವಮಾನ ಸಹಿಸೊಲ್ಲವೆಂದ ಅಮಿತ್ ಶಾ!

ವಕೀಲ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್‌ರೇವಣ್ಣ ಸ್ಟೇ ತರುತ್ತಾರೆ. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋದು ಗೊತ್ತಿಲ್ಲ ಎಂದು ಡ್ರೈವರ್ ಕಾರ್ತಿಕ್ ಹೇಳಿದರು.

ವಕೀಲ ದೇವರಾಜೇಗೌಡರನ್ನು ಬಿಟ್ಟರೆ ನಾನು ಯಾರಿಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋದ ಪೆನ್‌ಡ್ರೈವ್ ಕೊಟ್ಟಿಲ್ಲ. ಜೊತೆಗೆ, ಈ ಪೆನ್‌ಡ್ರೈವ್ ಯಾರು ಹಂಚಿದರೂ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ? ನನಗೆ ರಕ್ಷಣೆ ಸಿಕ್ಕಿದ ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳ್ತೀನಿ ಎಂದು ತಿಳಿಸಿದ್ದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಧಿಕೃತವಾಗಿ ಜೆಡಿಎಸ್‌ನಿಂದ ಅಮಾನತು; ಜಿ.ಟಿ. ದೇವೇಗೌಡ

ಎಸ್‌ಐಟಿ ತನಿಖೆಗೆ ಹಾಜರಾದ ಡ್ರೈವರ್ ಕಾರ್ತಿಕ್: ಎಸ್ಐಟಿ ವಿಚಾರಣೆಗೆ ಹಾಜರಾದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಎಂಬಾತ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದಾನೆ. ಕೆಲವು ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿ ಟೀಂ ನಿಂದ ವಿಚಾರಣೆ ಮಾಡಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಎಸ್ಐಟಿ ಮಾಹಿತಿ ಕಲೆ ಹಾಕುತ್ತಿದೆ.

click me!