ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್‍ಗೆ ಬಿಜೆಪಿ MLC ಬಲಿ

Published : May 01, 2021, 03:37 PM IST
ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್‍ಗೆ ಬಿಜೆಪಿ MLC ಬಲಿ

ಸಾರಾಂಶ

ಮಹಾಮಾರಿ ಕೊರೋನಾ ಎರಡನೇ ಅಲೆ ಭೀಕರವಾಗಿದ್ದು, ಸಾವಿನ ಪ್ರಮಾಣದಲ್ಲಿ ಹೆಚ್ಚಾಗಿದೆ. ಅದರಲ್ಲೂ ದೊಡ್ಡ-ದೊಡ್ಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜಕಾರಣಿಗಳನ್ನೂ ಸಹ ಬಲಿ ಪಡೆಯುತ್ತಿದೆ.

ಪಾಟ್ನಾ, (ಮೇ.01): ದೇಶದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜಕಾರಣಿಗಳ ಸಾವು ಕೂಡ ಮುಂದುವರೆದಿದೆ. ಇದೀಗ ಇದರ ಸಾಲಿಗೆ ಬಿಹಾರ ಬಿಜೆಪಿ ಎಂಎಲ್‌ಸಿ ಹರಿ ನಾರಾಯಣ್ ಚೌಧರಿ ಸೇರಿದ್ದಾರೆ.

ಹೌದು.. ಬಿಹಾರ ಬಿಜೆಪಿ ವಿಧಾನಪರಿಷ್ತ ಸದಸ್ಯ ಹರಿ ನಾರಾಯಣ್ ಚೌಧರಿ  ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದ್ದರಿಂದ 1 ವಾರದ ಹಿಂದೆ ಇಂದಿರಾಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಬಿಹಾರ ವಿಧಾನ ಪರಿಷತ್ ಸಭಾಧ್ಯಕ್ಷ ಅವದೇಶ್ ನರೈನ್ ಸಿಂಗ್ ಹೇಳಿದ್ದಾರೆ.

ಭಾರತದ ಕೊರೋನಾ ನಿಯಂತ್ರಣಕ್ಕೆ US ಮೆಡಿಕಲ್ ಮಹತ್ವದ ಸಲಹೆ!

77 ವರ್ಷದ ಚೌಧರಿ 2015 ರಲ್ಲಿ ಸಮಸ್ತಿಪುರ ಸ್ಥಳೀಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇನ್ನು ನಾರಾಯಣ ಅವರ ನಿಧನಕ್ಕೆ ಸಿಎಂ ನಿತೀಶ್ ಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ.

ಚೌಧರಿ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ. ಸರ್ಕಾರದ ಸಕಲ ಗೌರವಗಳೊಂದಿಗೆ ಮುಕ್ತಿಧಾಮದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್