ಬಿಜೆಪಿ- ಜೆಡಿಎಸ್ ಲೋಕಸಭಾ ಚುನಾವಣೆಯ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹಿಂದಿನಿಂದಲೂ ದೇವೆಗೌಡರು ಜಾತ್ಯತೀತ ಸಿದ್ದಾಂತವನ್ನು ಪ್ರತಿಪಾದಿಸುತ್ತಾ ಬಂದವರು. ಅವರು ಕೂಡ ಈ ಬಾರಿ ಜಾತ್ಯಾತೀತ ಸಿದ್ದಾಂತಕ್ಕೆ ಬ್ರೇಕ್ ಹಾಕಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಕಡೆಗಳಲ್ಲಿ ಸೋತಿರುವ ಜೆಡಿಎಸ್‌ಗೆ ತಮ್ಮ ಪಕ್ಷದ ಅಸ್ತಿತ್ವದ ಬಗ್ಗೆ ಚಿಂತೆಯಾಗಿದೆ. ಅದರಿಂದಲೇ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ವ್ಯಂಗ್ಯವಾಡಿದ ಜೆ.ಟಿ. ಪಾಟೀಲ
ಕುಂದಾಪುರ(ನ.30): ಕಾಂಗ್ರೆಸ್ ಭಾಗ್ಯಗಳ ಕುರಿತು ಟೀಕೆ ಮಾಡುವ ಬಿಜೆಪಿಗರು ಪ್ರಧಾನಿ ಮೋದಿ ಉದ್ಯಮಿಪತಿಗಳ ಸಾಲ ಮನ್ನಾ ಮಾಡಿದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಭಾಗ್ಯಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಜೊತೆಗೆ ರಾಜ್ಯವನ್ನು ಅಭಿವೃದ್ದಿಪಥದಲ್ಲಿ ಕೊಂಡೊಯ್ಯುತ್ತದೆ ಎಂದು ಬೀಳಗಿ ಶಾಸಕ ಜಗದೀಶ್ ತಿಮ್ಮನಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳವಾರ ಖಾಸಗಿ ಕೆಲಸದ ನಿಮಿತ್ತ ಕುಂದಾಪುರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕಾಗಿ ನಾನು ಮುನಿಸಿಕೊಂಡಿಲ್ಲ. ಮೂರು ಬಾರಿ ಶಾಸಕನಾಗಿ ಆಯ್ಕೆಯಾದಾಗಲೂ ಇನ್ನೊಬ್ಬರನ್ನು ಸಚಿವರನ್ನಾಗಿ ಮಾಡಿ ಎಂದು ಹೇಳಿದವನು ನಾನು. ಹಣವೂ ಸೇರಿದಂತೆ ಸೀರೆ, ಇಸ್ತ್ರೀ ಪೆಟ್ಟಿಗೆ, ಸಕ್ಕರೆಗಳನ್ನು ಹಂಚಿ ನನ್ನ ವಿರುದ್ಧ ಚುನಾವಣೆ ಎದುರಿಸಿದ ಬಿಜೆಪಿಯ ಪ್ರಬಲ ನಾಯಕನ ವಿರುದ್ಧ ಗೆಲುವು ಕಂಡು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಿಗಮ ಮಂಡಳಿ ಸಿಗುವ ಬಗ್ಗೆ ಮಾಹಿತಿ ಇಲ್ಲ. ಹಣೆಬರಹ ಚೆನ್ನಾಗಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು ಎಂದರು.
undefined
ನೇಜಾರು ಕಗ್ಗೊಲೆ ಆರೋಪಿಗೆ ಗಲ್ಲುಶಿಕ್ಷೆಯೇ ಆಗಬೇಕು: ಅಬ್ದುಲ್ ಅಜೀಂ
ಬಿಜೆಪಿ- ಜೆಡಿಎಸ್ ಲೋಕಸಭಾ ಚುನಾವಣೆಯ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹಿಂದಿನಿಂದಲೂ ದೇವೆಗೌಡರು ಜಾತ್ಯತೀತ ಸಿದ್ದಾಂತವನ್ನು ಪ್ರತಿಪಾದಿಸುತ್ತಾ ಬಂದವರು. ಅವರು ಕೂಡ ಈ ಬಾರಿ ಜಾತ್ಯಾತೀತ ಸಿದ್ದಾಂತಕ್ಕೆ ಬ್ರೇಕ್ ಹಾಕಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಕಡೆಗಳಲ್ಲಿ ಸೋತಿರುವ ಜೆಡಿಎಸ್‌ಗೆ ತಮ್ಮ ಪಕ್ಷದ ಅಸ್ತಿತ್ವದ ಬಗ್ಗೆ ಚಿಂತೆಯಾಗಿದೆ. ಅದರಿಂದಲೇ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಜೆ.ಟಿ. ಪಾಟೀಲ ವ್ಯಂಗ್ಯವಾಡಿದರು.
ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ
ಈ ಸಂದರ್ಭ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ, ಯುವ ಕಾಂಗ್ರೆಸ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಪೂಜಾರಿ ಹೇರಿಕುದ್ರು, ಕುಂದಾಪುರ ಬ್ಲಾಕ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕೋಡಿ ಇದ್ದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜನಸ್ಪಂದನ ಕಾರ್ಯಕ್ರಮ ಚುರುಕು ಪಡೆದುಕೊಳ್ಳುತ್ತಿದೆ. ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿಯೂ ಯಶಸ್ವಿಯಾಗುತ್ತಿದೆ. ಈ ಕಾರ್ಯಕ್ರಮದಿಂದ ಬಹುತೇಕ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸ್ಥಳದಲ್ಲೇ ನ್ಯಾಯ ಸಿಗುತ್ತಿರುವುದು ಸ್ವಾಗತಾರ್ಹ ಎಂದು ಬೀಳಗಿ ಶಾಸಕ ಜೆ.ಟಿ. ಪಾಟೀಲ ತಿಳಿಸಿದ್ದಾರೆ.