ಕೊರೋನಾ ಭೀತಿ ಮಧ್ಯೆ ಕರ್ನಾಟಕದಲ್ಲಿ ನಾಲ್ಕು ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಬೆಂಗಳೂರು(ಅ. 03): ರಾಜ್ಯದ 2 ಶಿಕ್ಷಕರ ಕ್ಷೇತ್ರ ಹಾಗೂ 2 ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದ ಎಂ ಗೌಡ, ಪಶ್ಚಿಮ ಪದವೀಧರ ಕ್ಷೇತ್ರ-ಎಂ.ವಿ.ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರ-ಶಶೀಲ್ ನಮೋಶಿ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಪುಟ್ಟಣ್ಣ ಅವರುಗಳ ಹೆಸರುಗಳನ್ನು ಅಂತಿಮಗೊಳಿಸಿದೆ.
ಕರ್ನಾಟಕ ವಿಧಾನ ಪರಿಷತ್‌ನ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ
ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಪುಟ್ಟಣ್ಣ ಅವರನ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಖಾಡಕ್ಕಿಳಿಸಿದೆ. ಇನ್ನು ಎಂ.ವಿ.ಸಂಕನೂರು ಅವರನ್ನ ಮತ್ತೆ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿದೆ.
ಜೆಡಿಎಸ್ ಅಭ್ಯರ್ಥಿಗಳು
ಇನ್ನು ಜೆಡಿಎಸ್ ಸಹ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಮಾಜಿ ಎಂಎಲ್ಸಿ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಎಸ್ ಪುರ್ಲೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ ಪಿ ರಂಗನಾಥ್ ಅವರನ್ನ ಆಯ್ಕೆ ಮಾಡಿದೆ.
ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದ್ದು, ಯಾರು ಗೆಲ್ಲಲಿದ್ದಾರೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.