
ಬೆಂಗಳೂರು(ಜೂ.21): ಬಸವರಾಜ ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ರಾಜ್ಯದ ಜನ ಚುನಾವಣೆಯಲ್ಲೇ ಉತ್ತರ ಕೊಟ್ಟಿದ್ದಾರೆ. ನಾವು ಜನರಿಗೆ ಕೊಟ್ಟಿರುವ ಮಾತಿನಂತೆ ಹೇಗಾದರೂ ಅಕ್ಕಿ ಖರೀದಿಸಿ ತಂದು ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ಕೊಟ್ಟೇ ಕೊಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ 5 ಕೆಜಿ ಖರೀದಿಗೆ ಆಹಾರ ನಿಗಮ ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆದರೆ ಈಗ ಅಕ್ಕಿ ನೀಡದ ಮೂಲಕ ರಾಜಕೀಯ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ವಿಫಲಗೊಳಿಸಲು ಬಿಜೆಪಿ ಹೊರಟಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ಕರ್ನಾಟಕಕ್ಕೆ ಕೇಂದ್ರದ ಬೆಂಬಲ ಇರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣೆ ಸಮಯದಲ್ಲಿ ಹೇಳಿದ್ದರು. ಈಗ ಹಾಗೇ ಮಾಡುತ್ತಿದ್ದಾರೆ. ಆದರೆ, ಅವರು ಏನು ಮಾಡಿದರೂ ನಮ್ಮ ಯೋಜನೆ ವಿಫಲಗೊಳಿಸಲಾಗುವುದಿಲ್ಲ. ನಾವು ನುಡಿದಂತೆ ನಡೆಯುತ್ತೇವೆ ಅಂತ ತಿಳಿಸಿದ್ದಾರೆ.
ಡಿಕೆಶಿ ಮೇಕೆದಾಟು ಹೇಳಿಕೆ: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಎಐಎಡಿಎಂಕೆ
ನಮ್ಮ ಮುಖ್ಯಮಂತ್ರಿ ಅವರು ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಪ್ರಯತ್ನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೇಗಾದರೂ ಮಾಡಿ ಅಕ್ಕಿ ಖರೀದಿಸಿ ತಂದು ಬಡ ಜನರಿಗೆ ತಲಾ 10 ಕೆ.ಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.