ಸಚಿವ ಪ್ರಿಯಾಂಕ್‌ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ ಯತ್ನ

By Kannadaprabha NewsFirst Published Mar 23, 2024, 11:41 AM IST
Highlights

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಟ್ವಿಟ್ ಮಾಡಿರುವುದನ್ನು ಖಂಡಿಸಿ ಗ್ರಾಮೀ ಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿದ ಘಟನೆ ನಡೆಯಿತು.

ಬೆಂಗಳೂರು (ಮಾ.23): ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಟ್ವಿಟ್ ಮಾಡಿರುವುದನ್ನು ಖಂಡಿಸಿ ಗ್ರಾಮೀ ಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿದ ಘಟನೆ ನಡೆಯಿತು. ನಗರದಲ್ಲಿನ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪಕ್ಷದ ಕಾರ್ಯಕರ್ತರನ್ನು ಪೊಲೀ ಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಬಿಜೆಪಿ ದೂರು ನೀಡಿದೆ. 

ಪ್ರಿಯಾಂಕ್ ಖರ್ಗೆ ಅವರು ತಮ್ಮ ಟ್ವಿಟರ್‌ನಲ್ಲಿ 'ಚೋರ್‌ಗುರು ಮತ್ತು ಚಾಂಡಾಲ್ ಶಿಷ್ಯರಿಂದ ಆದೇಶ ಕ್ಕಾಗಿ ಕಾಯುತ್ತಿರುವ ಜಾರಿ ಸಂಸ್ಥೆಗಳು ಇಷ್ಟು ದಿನ ಏನು ಮಾಡುತ್ತಿದ್ದವು' ಎಂದು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಅಮಿತ್ ಶಾ ಕುರಿತು ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಸಚಿವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಲಾ ಯಿತು. ಈ ವೇಳೆ ಪೊಲೀಸರು ಧೀರಜ್ ಮುನಿರಾಜ್ ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರನ್ನು ವಶಕ್ಕೆ ಪಡೆದರು. 

ಪ್ರಧಾನಿ ಮೋದಿ ಸರ್ವಾಧಿಕಾರಿ ಆಡಳಿತ ಕೊನೆಗಾಣಿಸಿ: ಕಿಮ್ಮನೆ ರತ್ನಾಕರ್ ವಾಗ್ದಾಳಿ

ಆಯೋಗಕ್ಕೆ ದೂರು: ಈ ನಡುವೆ ಪ್ರಿಯಾಂಕ್ ಖರ್ಗೆ ವಿರುದ್ದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ದೂರು ನೀಡಿದ್ದಾರೆ. ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿ ವೇಳೆ ವೈಯಕ್ತಿಕ ನಿಂದನೆ ಮಾಡಲಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

click me!