ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೂತ್ ಮಟ್ಟದ ಮನೆ- ಮನೆಗೂ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.
ಕನಕಗಿರಿ (ಜ.4) : ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೂತ್ ಮಟ್ಟದ ಮನೆ- ಮನೆಗೂ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.
ಪಟ್ಟಣದ 13ನೇ ವಾರ್ಡ್‌ನಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಉತ್ತುಂಗಕ್ಕೆ ಬೆಳೆಯುತ್ತಿದೆ. ಸ್ಥಳೀಯ ಮಟ್ಟದಲ್ಲಿ ಪಕ್ಷಕ್ಕೆ ಮತ್ತಷ್ಟುಬಲ ತುಂಬುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿ ಮನೆ- ಮನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ತಲುಪಿಸುವ ಕೆಲಸ ಮಾಡಬೇಕಿದೆ ಎಂದರು.
undefined
ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ
ನೀರಾವರಿ, ಸಹಕಾರಿ, ಕಂದಾಯ, ಆರೋಗ್ಯ, ಧಾರ್ಮಿಕ, ಕ್ರೀಡೆ ಸೇರಿದಂತೆ ನಾನಾ ರಂಗಗಳಲ್ಲಿ ಉತ್ತಮವಾಗಿ ಕೆಲಸ ಮಾಡಿರುವ ಸಚಿವರು ಸರ್ಕಾರಕ್ಕೆ ಕೀರ್ತಿ ತಂದಿದ್ದಾರೆ. ಇಂತಹ ಸಂದರ್ಭವನ್ನು ಸದ್ಬಳಕೆ ಮಾಡಿಕೊಂಡು ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕಾದ ಕೆಲಸ ನಮ್ಮದಾಗಬೇಕು. ಕ್ಷೇತ್ರದಲ್ಲಿ ಬಿಜೆಪಿ ಉತ್ತಮ ಕೆಲಸ ಮಾಡುತ್ತಿರುವುದರಿಂದ ಮುಂಬರುವ ವಿಧಾನಸಭೆ ಚುನಾವಣೆ(Karnataka assembly election)ಯಲ್ಲಿ ಪಕ್ಷದ ಗೆಲುವು ನಿಶ್ಚಿತ ಎಂದರು.
ಪಕ್ಷದ ಜಿಲ್ಲಾ ಪ್ರಭಾರಿ ನರಸಿಂಗರಾವ್ ಮಾತನಾಡಿ, ಬುನಾದಿ ಉತ್ತಮವಾಗಿದ್ದರೆ ಮನೆಯೂ ಉತ್ತಮವಾಗಿರುತ್ತದೆ ಎನ್ನುವ ಮಾತಿನಂತೆ ಬೂತ್ ಮಟ್ಟದ ಕಾರ್ಯಕರ್ತರು ಸರಿಯಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಬೂತ್‌ನಲ್ಲಿ ಜ. 2ರಿಂದ 12ರ ವರೆಗೆ ಬೂತ್ ವಿಜಯ ಅಭಿಯಾನ(Vijaya sankalpa) ನಡೆಸಿ, ಸಾರ್ವಜನಿಕರೊಟ್ಟಿಗೆ ಸರ್ಕಾರದ ಸಾಧನೆಗಳನ್ನು ತಿಳಿಸುವಂತಾಗಬೇಕು ಎಂದರು.
ಬಿಜೆಪಿ ಗೆಲುವು ಕಾಲದ ಅವಶ್ಯಕತೆ: ಬಿ.ಎಲ್.ಸಂತೋಷ್
ಮಂಡಲ ಬಿಜೆಪಿ ವತಿಯಿಂದ ಶಾಸಕ ದಢೇಸೂಗೂರು ಹಾಗೂ ಪಕ್ಷದ ಹಿರಿಯ ಮುಖಂಡ ಡಿ.ಎಂ. ಅರವಟಗಿಮಠ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಡಿ.ಎಂ. ಅರವಟಗಿಮಠ, ಬಸವರಾಜಪ್ಪ ಗುಗ್ಗಳಶೆಟ್ರ, ಬಿ.ಬಿ. ಜೋಶಿ, ಮಹಾಂತೇಶ ಸಜ್ಜನ, ವಾಗೀಶ ಹಿರೇಮಠ, ಸುರೇಶ ಗುಗ್ಗಳಶೆಟ್ರ, ಸಣ್ಣ ಕನಕಪ್ಪ, ಪ್ರಕಾಶ ಹಾದಿಮನಿ, ನಾಗಭೂಷಣ ಜನಾದ್ರಿ, ಅಶ್ವಿನಿ ಟಿ. ದೇಸಾಯಿ, ಮಂಜುನಾಥರೆಡ್ಡಿ, ಮಮ್ಮದಪಾಷಾ ಮುಲ್ಲಾರ, ಶರಣಪ್ಪ ಭಾವಿಕಟ್ಟಿ, ರಂಗಪ್ಪ ಕೊರಗಟಗಿ, ಹರೀಶ ಪೂಜಾರ ಸೇರಿದಂತೆ ಇತರರು ಇದ್ದರು.