ಹಿರೇಕೆರೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಬಿ ಸಿ ಪಾಟೀಲ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು ಈ ನಿಟ್ಟಿನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಹಾವೇರಿ [ಡಿ.09] ರಾಜ್ಯದಲ್ಲಿ ಚುನಾವಣೆ ಮತ ಎಣಿಕೆ ಕಾರ್ಯ ಜೋರಾಗುತ್ತಲೇ ಇಲ್ಲಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರ ಸೆಲೆಬ್ರೇಷನ್ ಕೂಡ ನಡೆಯುತ್ತಿದೆ.
ಇತ್ತ ಹಿರೇಕೆರೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಮುನ್ನಡೆ ಕಾಯ್ದುಕೊಂಡಿದ್ದು ಈ ನಿಟ್ಟಿನಲ್ಲಿ ಈಗಾಗಲೇ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.
ಸ್ಥಳೀಯ ಮುಖಂಡರು, ಈಗಾಗಲೆ ಮುನ್ನಡೆಯಲ್ಲಿರುವ ಬಿಸಿ ಪಾಟೀಲ್ ಅವರ ಗೆಲುವು ಖಚಿತ ಎಂದು ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಹಾರ ಹಾಕಿ ಅಭಿನಂದನೆ ತಿಳಿಸುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ 30, 900 ಮತಗಳನ್ನು ಪಡೆಯುವ ಮೂಲಕ 11400ಕ್ಕೂ ಅಧಿಕ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಇಲ್ಲಿ ಬಿ.ಎಚ್ ಬಿನಿಕೋಡ್ ಸ್ಪರ್ಧೆ ಮಾಡಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ
ಅನರ್ಹರಾಗಿ ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಪಾಟೀಲ್ ಅಭಿಮಾನಿಗಳಲ್ಲಿ ಗೆಲುವಿನ ಭರವಸೆ ಹೆಚ್ಚಾಗಿದೆ.