ಬಿಜೆಪಿ ಅಭ್ಯರ್ಥಿ ಪಟ್ಟಿ ಶೀಘ್ರವೇ ಘೋಷಣೆ: ನಳಿನ್‌ ಕುಮಾರ್‌ ಕಟೀಲ್‌

Published : Mar 29, 2023, 10:51 PM IST
ಬಿಜೆಪಿ ಅಭ್ಯರ್ಥಿ ಪಟ್ಟಿ ಶೀಘ್ರವೇ ಘೋಷಣೆ: ನಳಿನ್‌ ಕುಮಾರ್‌ ಕಟೀಲ್‌

ಸಾರಾಂಶ

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಪಾರ್ಲಿಮೆಂಟರಿ ಬೋರ್ಡ್‌ ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಮಂಗಳೂರು (ಮಾ.29): ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಪಾರ್ಲಿಮೆಂಟರಿ ಬೋರ್ಡ್‌ ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳ ಬದಲಾವಣೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಕೆಲವು ಹಾಲಿ ಶಾಸಕರನ್ನು ಕೈಬಿಡುವ ಬಗ್ಗೆ ಅಥವಾ ಅವರನ್ನೇ ಅಭ್ಯರ್ಥಿ ಆಗಿಸುವ ಬಗ್ಗೆ ಪಾರ್ಲಿಮೆಂಟರಿ ಬೋರ್ಡ್‌ ನಿರ್ಧಾರ ಕೈಗೊಳ್ಳುತ್ತದೆ. ಈ ಹಿಂದಿನಿಂದಲೂ ನಮ್ಮ ನೀತಿ ಇದೆ.

ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಈ ಬಾರಿಯೂ ಅದೇ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು. ಒಳ ಮೀಸಲಾತಿ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅದಕ್ಕಾಗಿ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಖ್ಯಮಂತ್ರಿಗಳು ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಎಲ್ಲರೂ ಸಮಾಧಾನದಿಂದ ಇದ್ದಾರೆ, ಯಾರೂ ನೋವಿನಲ್ಲಿ ಇಲ್ಲ. ಆದರೆ ಕಾಂಗ್ರೆಸ್‌ ಇದರಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಸುರಪುರ ಅಭಿವೃದ್ಧಿಗೆ ಬೆಜೆಪಿ ಬೆಂಬಲಿಸಿ: ಶಾಸಕ ರಾಜೂಗೌಡ

ಮೂರು ಹಂತದಲ್ಲಿ ಚುನಾವಣಾ ತಂತ್ರ: ಚುನಾವಣಾ ಆಯೋಗದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸುತ್ತದೆ. ಚುನಾವಣಾ ಪೂರ್ವ ತಯಾರಿಯನ್ನು ಪಕ್ಷ ಈಗಾಗಲೇ ಮಾಡಿಕೊಂಡಿದೆ. ಮೂರು ಹಂತದ ಚುನಾವಣಾ ಪ್ರಚಾರದ ತಂತ್ರಗಾರಿಕೆ ಮಾಡುತ್ತೇವೆ. ಯಡಿಯೂರಪ್ಪ ಹಾಗು ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು, ಇತರ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಸಚಿವರುಗಳು ಪ್ರಚಾರಕ್ಕೆ ಬರಲಿದ್ದಾರೆ. ಸಾರ್ವಜನಿಕ ಸಭೆಗಳು, ರೋಡ್‌ ಶೋಗಳು, ಮನೆ ಮನೆ ಪ್ರಚಾರ ಮಾಡಲಿದ್ದೇವೆ. 

ಯೋಗೇಶ್ವರ್‌ಗೆ ಸೋಲಿನ ಮುನ್ಸೂಚನೆ ಸಿಕ್ಕಿದ್ದು ಹತಾಶರಾಗಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಸಾರ್ವಜನಿಕ ಸಭೆ, ಯಾತ್ರೆಗಳು, ಮನೆ ಮನೆ ಭೇಟಿ, ಬೂತ್‌ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ, ವಿಜಯ ಸಂಕಲ್ಪ ಯಾತ್ರೆ ಮುಗಿಸಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಪಡೆಯುತ್ತೇವೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ