ರಾಜ್ಯಸಭೆಯ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ನಾರಾಯಣ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಇವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ
ಬೆಂಗಳೂರು (ನ.19): ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ನಾರಾಯಣ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಯಾವೊಬ್ಬ ಅಭ್ಯರ್ಥಿಯೂ ಕಣಕ್ಕೆ ಇಳಿಯದಿರುವುದರಿಂದ ನಾರಾಯಣ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.
ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಬುಧವಾರ ನಾರಾಯಣ್ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ಮುಖಂಡರು ಸಾಥ್ ನೀಡಿದರು. ರಾಜ್ಯಸಭೆಯ ಒಂದು ಸ್ಥಾನಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಕೆ. ನಾರಾಯಣ ನಾಮಪತ್ರ ಸಲ್ಲಿಸಿದ್ದಾರೆ.
ಜಾತಿಗೊಂದು ಅಭಿವೃದ್ಧಿ ನಿಗಮ: ಬಿಎಸ್‌ವೈ ನಡೆಗೆ ಬಿಜೆಪಿಯಲ್ಲೇ ಭುಗಿಲೆದ್ದ ಅಸಮಾಧಾನ..! .
ಇವರಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಸುಧಾಕರ್ ಎಂಬುವರು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಬಿಜೆಪಿ ಸದಸ್ಯರೆಂದು ನಮೂದಿಸಿರುವ ಸುಧಾಕರ್, ಲಿಂಗಸುಗೂರು ಗ್ರಾಮ ಪಂಚಾಯತಿಯ ಮಾಜಿ ಸದಸ್ಯರಾಗಿದ್ದಾರೆ. ಸುಧಾಕರ್ ಅವರಿಗೆ ಯಾರೊಬ್ಬರೂ ಸೂಚಕರು ಇಲ್ಲದ ಕಾರಣ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹೆಚ್ಚಿದೆ.