ಸಿದ್ದರಾಮಯ್ಯ ಅವರೀಗ ವಿರೋಧ ಪಕ್ಷದ ನಾಯಕರೂ ಅಲ್ಲ, ನಾನು ಮಂತ್ರೀನೂ ಅಲ್ಲ. ನಾನು ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ. ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದ ವಿ.ಸೋಮಣ್ಣ.
ಚಾಮರಾಜನಗರ(ಏ.22): ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದರೆ ಒಳ್ಳೇದು. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದಾಗಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಿದ್ದರಾಮಯ್ಯ ಅವರೀಗ ವಿರೋಧ ಪಕ್ಷದ ನಾಯಕರೂ ಅಲ್ಲ, ನಾನು ಮಂತ್ರೀನೂ ಅಲ್ಲ. ನಾನು ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ. ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದು ಹೇಳಿದರು.
undefined
ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!
ನಾನು ಕಾಂಗ್ರೆಸ್‌ನಲ್ಲಿದ್ದಾಗ ಇವರಿಗೋಸ್ಕರ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಬರಿ ಮೈಯಲ್ಲಿ ದೇವಾಲಪುರದಿಂದ ಮೈಸೂರಿಗೆ ಹೋಗಿದ್ದೇನೆ. ನನ್ನ ಕಾರಿನ ಗ್ಲಾಸ್ ಒಡೆದಿದ್ದರು, ಪ್ಯಾಂಟ್ ಹರಿದು ಹಾಕಿದ್ದರು. ಆವತ್ತು ನನ್ನ ಸಮಾಜ ಎದುರು ಹಾಕಿಕೊಂಡು ಅವರಿಗೋಸ್ಕರ ಕೆಲ್ಸ ಮಾಡಿದ್ದೆ. ಇದೆಲ್ಲಾ ಸಿದ್ದರಾಮಯ್ಯ ಸಾಹೇಬರ ತಲೇಲಿ ಇಲ್ಲ. ನಾನು ಸಾಹೇಬ್ರೆ ಅಂತೀನಿ ಅವರು ಏಕ ವಚನದಲ್ಲಿ ಮಾತನಾಡ್ತಾರೆ. ಇದೇ ನನಗೂ ಅವರಿಗು ಇರೋ ವ್ಯತ್ಯಾಸ ಎಂದು ತಿರುಗೇಟು ನೀಡಿದರು.
ಸಿಎಂ ಆಗಲು ಏನ್ ಮಾಡ್ಬೇಕು:
ನಗರದ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಶುಕ್ರವಾರ ಬೆಳ್ಳಂ ಬೆಳಗ್ಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ‘ಸಿಎಂ ಆಗೋಕೆ ಏನ್ ಮಾಡ್ಬೇಕು ಅಂತಾ ಸೋಮಣ್ಣ’ ಅವರನ್ನು ಬಾಲಕನೊಬ್ಬ ಪ್ರಶ್ನಿಸಿದ. ‘ನೀನು ಏನು ಮಾಡ್ಬೇಡ ಹೋಗಪ್ಪಾ ತಂದೆ, ಚೆನ್ನಾಗಿ ಓದು. ಸಿಎಂ, ಗಿಎಂ ಎಲ್ಲಾ ಲೆಕ್ಕ ಇಲ್ಲ. ನೀನೆ ದೊಡ್ಡ ಸಿಎಂ. ಚೆನ್ನಾಗಿ ಓದು, ಸ್ಪೋಟ್ಸ್‌ರ್ ಆಕ್ಟಿವಿಟಿಯಲ್ಲಿರು ಬಾಕಿದೆಲ್ಲಾ ಬಿಟ್ಬಿಡು. ನಿನ್ನ ಹಣೆಯಲ್ಲಿದ್ರೆ ಬರ್ತೀಯಾ ಹೋಗು’ ಎಂದು ಹೇಳಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.