Karnataka Assembly Elections 2023: ಮೂರು ಹಂತದಲ್ಲಿ ಬಿಜೆಪಿ ಟಿಕೆಟ್‌ ಪಟ್ಟಿ?

Published : Mar 18, 2023, 05:27 AM IST
Karnataka Assembly Elections 2023: ಮೂರು ಹಂತದಲ್ಲಿ ಬಿಜೆಪಿ ಟಿಕೆಟ್‌ ಪಟ್ಟಿ?

ಸಾರಾಂಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿರುವ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಬಹುತೇಕ ಎಲ್ಲ ಸಚಿವರಿಗೂ ಟಿಕೆಟ್‌ ನೀಡುವುದು ಖಾತ್ರಿಯಾಗಿದೆ. ಚುನಾವಣೆ ಪ್ರಕಟಗೊಳ್ಳುತ್ತಿದ್ದಂತೆ 100 ಜನರ ಮೊದಲ ಪಟ್ಟಿ ಬಿಡುಗಡೆ ಸಂಭವ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿರುವ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಬಹುತೇಕ ಎಲ್ಲ ಸಚಿವರಿಗೂ ಟಿಕೆಟ್‌ ನೀಡುವುದು ಖಾತ್ರಿಯಾಗಿದೆ. ಚುನಾವಣೆ ಪ್ರಕಟಗೊಳ್ಳುತ್ತಿದ್ದಂತೆ 100 ಜನರ ಮೊದಲ ಪಟ್ಟಿ ಬಿಡುಗಡೆ ಸಂಭವ. 

ಬೆಂಗಳೂರು(ಮಾ.18):  ಆಡಳಿತಾರೂಢ ಬಿಜೆಪಿಯು ಮೂರು ಹಂತಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸುವ ಬಗ್ಗೆ ಚಿಂತನೆ ನಡೆಸಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಮ್ಮ ಅಭ್ಯರ್ಥಿಗಳನ್ನು ತ್ವರಿತವಾಗಿ ಪ್ರಕಟಿಸಿದರೂ ಚಿಂತೆಪಡುವ ಅಗತ್ಯವಿಲ್ಲ. ಆತುರಪಡದೆ ಅಳೆದೂ ತೂಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪ್ರಕಟಿಸೋಣ ಎಂಬ ಅಭಿಪ್ರಾಯವನ್ನು ಬಿಜೆಪಿ ವರಿಷ್ಠರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡ ಬಳಿಕ ಮೊದಲ ಹಂತದಲ್ಲಿ ಯಾವುದೇ ಗೊಂದಲವಿಲ್ಲದ, ಕಗ್ಗಂಟು ಇಲ್ಲದ ಸುಮಾರು ನೂರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ವರಿಷ್ಠರು ಒಲವು ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿ: ನಾಗರಾಜು

ಹಾಗೆ ನೋಡಿದರೆ, ಜೆಡಿಎಸ್‌ ಈಗಾಗಲೇ ಇತರ ಎಲ್ಲ ರಾಜಕೀಯ ಪಕ್ಷಗಳಿಗಿಂತ ಮೊದಲೇ ತನ್ನ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಪ್ರಕಟಿಸಿದೆ. ಕಾಂಗ್ರೆಸ್‌ ಈಗ ಗಂಭೀರವಾಗಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಿದ್ದು, ಶೀಘ್ರದಲ್ಲೇ ಪಟ್ಟಿಪ್ರಕಟಿಸುವ ನಿರೀಕ್ಷೆಯಿದೆ. ಆದರೆ, ಬಿಜೆಪಿ ಮಾತ್ರ ಅಭ್ಯರ್ಥಿಗಳ ಆಯ್ಕೆಗಿಂತ ಪಕ್ಷ ಸಂಘಟನೆ ಬಲಪಡಿಸುವತ್ತ ಹೆಚ್ಚು ಗಮನಹರಿಸಿದೆ. ಪಕ್ಷ ಸಂಘಟನೆ ಬಲಗೊಂಡ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಅಷ್ಟುಕಷ್ಟಕರವಾಗುವುದಿಲ್ಲ. ಮೇಲಾಗಿ, ಇತರ ಪಕ್ಷಗಳ ನಡೆ ಆಧರಿಸಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದು ಎಂಬ ಲೆಕ್ಕಾಚಾರವೂ ಬಿಜೆಪಿ ನಾಯಕರಲ್ಲಿದೆ ಎನ್ನಲಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿರುವ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಬಹುತೇಕ ಎಲ್ಲ ಸಚಿವರಿಗೂ ಟಿಕೆಟ್‌ ನೀಡುವುದು ಖಾತ್ರಿಯಾಗಿದೆ. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಚುನಾವಣೆಗೆ ಸ್ಪರ್ಧಿಸದೆ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಹಾಗೊಂದು ವೇಳೆ ಪುತ್ರನಿಗೆ ಟಿಕೆಟ್‌ ಸಿಕ್ಕರೆ ತಾವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ, ಇದಕ್ಕೆ ಪಕ್ಷದ ವರಿಷ್ಠರು ಒಪ್ಪುತ್ತಾರಾ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಕಾಂಗ್ರೆಸ್ ನಾಯಿಗಳು ಮೋದಿ, ಬೊಮ್ಮಾಯಿಯನ್ನು ಕೆಟ್ಟದ್ದಾಗಿ ಬೈಯುತ್ತವೆ: ಈಶ್ವರಪ್ಪ

ಈ ನಡುವೆ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿರುವ ಪಕ್ಷದ ನಾಯಕರಿಗೆ ಬಹುತೇಕ ರಾಜ್ಯದ ಯಾವ ಕ್ಷೇತ್ರಗಳಲ್ಲಿ ಯಾವ ಪರಿಸ್ಥಿತಿ ಇದೆ ಎಂಬುದರ ಸ್ಥೂಲ ಮಾಹಿತಿ ಲಭ್ಯವಾಗುತ್ತಿದೆ. ಹೀಗಾಗಿ, ಈ ಯಾತ್ರೆ ಮುಗಿದ ಬಳಿಕ ರಾಜ್ಯ ಘಟಕದ ಹಿರಿಯ ನಾಯಕರು ಒಂದೆಡೆ ಕುಳಿತು ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಕೋರ್‌ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವಿಸ್ತೃತ ಚಿಂತನ ಮಂಥನ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಜೆಪಿ ಲೆಕ್ಕಾಚಾರವೇನು?

- ಕಾಂಗ್ರೆಸ್‌, ಜೆಡಿಎಸ್‌ ತ್ವರಿತವಾಗಿ ಅಭ್ಯರ್ಥಿ ಪ್ರಕಟಿಸಿದರೂ ತಾನು ಅಳೆದು ತೂಗಿ ಅಂತಿಮಗೊಳಿಸಬೇಕು
- ಮೊದಲಿಗೆ ಯಾವುದೇ ಗೊಂದಲವಿಲ್ಲದ ಸುಮಾರು 100 ಕ್ಷೇತ್ರಗಳ ಅಭ್ಯರ್ಥಿ ಹೆಸರು ಪ್ರಕಟಿಸಬೇಕು
- ತಕ್ಷಣಕ್ಕೆ ಅಭ್ಯರ್ಥಿಗಳ ಆಯ್ಕೆಗಿಂತ ಪಕ್ಷ ಸಂಘಟನೆ ಬಲಪಡಿಸಲು ಗಮನ ನೀಡಬೇಕು
- ಸದ್ಯಕ್ಕೆ ಬೊಮ್ಮಾಯಿ ಸಂಪುಟದ ಎಲ್ಲ ಸಚಿವರಿಗೂ ಸ್ಪರ್ಧೆಗೆ ಅವಕಾಶ ಸಿಗೋದು ಪಕ್ಕಾ
- ಸಚಿವ ಆನಂದ್‌ ಸಿಂಗ್‌ ಮಾತ್ರ ಸ್ಪರ್ಧೆಗೆ ಹಿಂದೇಟು; ಪುತ್ರನನ್ನು ಕಣಕ್ಕಿಳಿಸಲು ಚಿಂತನೆ
- ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳದಿಂದ ಸ್ಪರ್ಧಿಸಲು ಮುಂದಾದ ಆನಂದ್‌ ಸಿಂಗ್‌?
- ವಿಜಯ ಸಂಕಲ್ಪ ಯಾತ್ರೆ ಬಳಿಕ ಕೋರ್‌ ಕಮಿಟಿ ಸಭೆಯಲ್ಲಿ ಬಿಜೆಪಿ ವರಿಷ್ಠರ ಅಂತಿಮ ನಿರ್ಧಾರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!