ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೋರಿ ಗೌರ್ನರ್‌ಗೆ ಬಿಜೆಪಿ ದೂರು

By Kannadaprabha News  |  First Published Jun 7, 2024, 11:47 AM IST

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆಯನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರಿಗೆ ದೂರು ನೀಡಿದೆ. 
 


ಬೆಂಗಳೂರು (ಜೂ.07): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆಯನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರಿಗೆ ದೂರು ನೀಡಿದೆ. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ ಶಾಸಕರ ನಿಯೋಗವು ರಾಜ್ಯಪಾಲ ಥಾವ‌ ಚಂದ್ ಗೆಹಲೋತ್ಪರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹೈದ್ರಾಬಾದ್‌ನಲ್ಲಿ 18ಕ್ಕೂ ಹೆಚ್ಚು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿ ದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. 

Tap to resize

Latest Videos

ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕ ಕಾ.ಪು.ಸಿದ್ದಲಿಂಗಸ್ವಾಮಿ ನಿಧನ

ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು ಎಂದರು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳು ಹಿಂದೆ ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ. ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊ ಳ್ಳುವುದಿಲ್ಲ.ಮುಖ್ಯಮಂತ್ರಿಗಳುಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಯವರ ವರ್ತನೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

ಹಗರಣದಲ್ಲಿ ಸಿಎಂ ಭಾಗಿ: ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕೆಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದಿದ್ದಾರೆ. ಎಲ್ಲ ಸತ್ಯ ಹೊರ ಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಸಿದ್ದರಾಮಯ್ಯ ಕೂಡಲೇ ರಾಜೀ ನಾಮೆ ನೀಡಬೇಕು. 

ನೀಟ್‌ ಪರೀಕ್ಷೆ ಅಕ್ರಮ ತನಿಖೆ: ಮರು ಪರೀಕ್ಷೆಗೆ ವಿದ್ಯಾರ್ಥಿಗಳ ಆಗ್ರಹ

ಅಕ್ರಮದ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದ್ದು, ಹಣ ಹೈದ್ರಾಬಾದ್‌ಗೆ ಹೋಗಿ ನಂತರ ದೆಹಲಿ ತಲುಪಿದೆ. ತಮ್ಮ ಬುಡಕ್ಕೆ ಬಂದುಬಿಡುತ್ತದೆಂಬ ಕಾರಣಕ್ಕೆ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪುತ್ತಿಲ್ಲ. ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಇದಕ್ಕೆ ಉತ್ತರ ನೀಡಬೇಕೆಂದು ಆಗ್ರಹಿಸಿದರು. ಬಡವರಿಗೆ ಸೇರಬೇಕಾಗಿದ್ದ ಹಣ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಎಸ್ಸಿ, ಎಸ್ಟಿ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ ಎಂದರು.

click me!