ಮೋದಿ, ಬಿಜೆಪಿ ವಿರುದ್ಧ ಕಾಂಗ್ರೆಸ್ಸಿಗರ ಸುಳ್ಳು ಆರೋಪ: ಖರ್ಗೆ, ಸಿದ್ದು ವಿರುದ್ಧ ಬಿಜೆಪಿ ದೂರು

By Kannadaprabha NewsFirst Published Apr 7, 2024, 8:43 AM IST
Highlights

ಪುಲ್ವಾಮ ದಾಳಿಗೆ ಬಿಜೆಪಿಯವರೇ ಕಾರಣ ಎಂಬ ಕಾಂಗ್ರೆಸ್ ಶಾಸಕರು ಮತ್ತು ಗೃಹ ಹೇಳಿಕೆ ಖಂಡನೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿದ್ದು, ಪುಲ್ವಾಮ ದಾಳಿಗೆ ಪಾಕಿಸ್ತಾನವೇ ಕಾರಣ ಎಂಬುದಕ್ಕೆ ಸ್ಪಷ್ಟವಾದ ಆಧಾರಗಳು ಸಿಕ್ಕಿವೆ. ಆದರೂ ಬಿಜೆಪಿಯವರೇ ಕಾರಣ ಎಂಬ ಹೇಳಿಕೆ ಸರಿಯಲ್ಲ. ಇಂತಹ ಸಚಿವರು ಮತ್ತು ಶಾಸಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಬೆಂಗಳೂರು(ಏ.07):  ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಆಧಾರ ಮೇಲೆ ಮತ ಕೇಳಿರುವ ವಿಚಾರ ಸಂಬಂಧ ಕಾಂಗ್ರೆಸ್‌ ವಿರುದ್ಧ ಮುಖ್ಯಚುನಾವಣಾಧಿಕಾರಿ ಕಚೇರಿಗೆ ಬಿಜೆಪಿ ದೂರು ನೀಡಿದೆ.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿತು.

Lok Sabha Election 2024: ಪ್ರಜಾತಂತ್ರ ಉಳಿಸಲು ಕಾಂಗ್ರೆಸ್‌ ಗೆಲ್ಲಿಸಿ : ಸಿಎಂ ಸಿದ್ದರಾಮಯ್ಯ

ಒಟ್ಟು ನಾಲ್ಕು ವಿಚಾರಗಳ ಕುರಿತು ಚುನಾವಣಾ ಸಚಿವರ ಆಯೋಗಕ್ಕೆ ದೂರು ನೀಡಲಾಗಿದೆ. ಪುಲ್ವಾಮ ದಾಳಿಗೆ ಬಿಜೆಪಿ ಕಾರಣ ಎಂದು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್ ಶಾಸಕರು ಮತ್ತು ಸಚಿವರ ವಿರುದ್ದ, ಚೀನಾ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಅಫೀಮು ಸೇವಿಸಿ ಮಲಗಿದ್ದರು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿರುದ್ಧ, ಬಿಜೆಪಿಯವರೆಲ್ಲಾ ಭಯೋ ತ್ಪಾದಕರು ಎಂಬ ಶಾಸಕ ಬೇಳೂರು ಗೋಪಾ ಲಕೃಷ್ಣ ಹೇಳಿಕೆ ವಿರುದ್ಧಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಆಧಾರದ ಮೇಲೆ ಮತ ಕೇಳುತ್ತಿರುವ ವಿರುದ್ದ ದೂರು ನೀಡಲಾಗಿದೆ.

ಮೋದಿ ದೇಶಕ್ಕೆ ಮಾತ್ರವಲ್ಲ, ವಿಶ್ವಕ್ಕೆ ನಾಯಕ: ವಿಜಯೇಂದ್ರ

ಪುಲ್ವಾಮ ದಾಳಿಗೆ ಬಿಜೆಪಿಯವರೇ ಕಾರಣ ಎಂಬ ಕಾಂಗ್ರೆಸ್ ಶಾಸಕರು ಮತ್ತು ಗೃಹ ಹೇಳಿಕೆ ಖಂಡನೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿದ್ದು, ಪುಲ್ವಾಮ ದಾಳಿಗೆ ಪಾಕಿಸ್ತಾನವೇ ಕಾರಣ ಎಂಬುದಕ್ಕೆ ಸ್ಪಷ್ಟವಾದ ಆಧಾರಗಳು ಸಿಕ್ಕಿವೆ. ಆದರೂ ಬಿಜೆಪಿಯವರೇ ಕಾರಣ ಎಂಬ ಹೇಳಿಕೆ ಸರಿಯಲ್ಲ. ಇಂತಹ ಸಚಿವರು ಮತ್ತು ಶಾಸಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಚೀನಾ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಅಫೀಮು ಸೇವಿಸಿ ಮಲಗಿದ್ದರು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸೂಕ್ತ ಕಾನೂನುಕ್ರಮಕೈಗೊಳ್ಳಬೇಕುಎಂದುಒತ್ತಾಯಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕಲಿಗ ಜಾತಿ ಆಧಾರದ ಮೇಲೆ ಮತ ಕೇಳುತ್ತಿದ್ದು, ಒಕ್ಕಲಿಗ ಮತಗಳು ಕಾಂಗ್ರೆಸ್‌ಗೆ ಹಾಕಬೇಕು ಎಂದಿದ್ದಾರೆ. ಕಾಂಗ್ರೆಸ್ಸಿಗರ ಹೇಳಿಕೆಗಳು ನೀತಿಸಂಹಿತೆ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

click me!