
ನವದೆಹಲಿ(ಏ.02): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕೀಳು ಪದಗಳಿಂದ ಟೀಕಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಶಾ ಕುರಿತ ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಸಮರ್ಥನೆ
ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ ಎಂಬ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ 400 ಸೀಟು ಗೆದ್ದು ಸಂವಿಧಾನ ಬದಲಾಯಿಸುವ ಗುರಿ ಇಟ್ಟುಕೊಂಡಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ? ಸಿಬಿಐ ಹೇಳಿರುವುದನ್ನಷ್ಟೆ ಯತೀಂದ್ರ ಹೇಳಿದ್ದಾನೆ. ಅದು ಅವನು ಬಳಸಿದ ಪದ ಅಲ್ಲ. ಸಿಬಿಐ ವರದಿಯಲ್ಲಿರುವ ಪದ. ಅದನ್ನೇ ಅವನು ಭಾಷಣದ ವೇಳೆ ಉಲ್ಲೇಖಿಸಿದ್ದಾನೆ. ಬಿಜೆಪಿಗೆ ಸಂಸ್ಕಾರವೇ ಗೊತ್ತಿಲ್ಲ. ಅಂಥವರು ಇಧೀಗ ಯತೀಂದ್ರಗೆ ಸಂಸ್ಕಾರ ಹೇಳಿಕೊಡಲು ಬಂದಿದ್ದಾರೆ ಎಂದು ಕಿಡಿಕಾರಿದರು.
ಹನೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಬ್ಬ ಗೂಂಡಾ, ರೌಡಿ, ಅವರ ವಿರುದ್ಧ ಕೊಲೆ ಪ್ರಕರಣಗಳಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತಮ್ಮ ಹೇಳಿಕೆ ಕುರಿತು ಯತೀಂದ್ರ ಕೂಡ ಸ್ಪಷ್ಟನೆ ನೀಡಿದ್ದು, ಸಿಬಿಐ ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ಏನು ಹೇಳಿದೆಯೋ ಅದನ್ನಷ್ಟೆ ನಾನು ಉಲ್ಲೇಖಿಸಿದ್ದೇನೆ ಎಂದು ಹೇಳಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.