
ನವದೆಹಲಿ(ಮಾ.19): ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇನ್ನೂ ಮಂಡ್ಯ ಕ್ಷೇತ್ರದ ಕುರಿತು ಏನೂ ನಿರ್ಧಾರ ಆಗಿಲ್ಲ. ಮಂಗಳವಾರ ಈ ಸಂಬಂಧ ಬೆಂಬಲಿಗರ ಜತೆಗೆ ಸಭೆ ನಡೆಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ನಡ್ಡಾ ಭೇಟಿ ಬಳಿಕ ದೆಹಲಿಯಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ನಿಮ್ಮಂಥ ನಾಯಕಿ ಪಕ್ಷಕ್ಕೆ ಬೇಕು. ನಾನು ಸ್ಪರ್ಧೆ ಮಾಡಬೇಕು ಎಂಬುದಕ್ಕಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದರೆ ಮಂಡ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಯುತ್ತದೆ ಎಂದು ತಿಳಿಸಿದರು.
Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್ ಕಾರಣ: ನಿಖಿಲ್ ಕುಮಾರಸ್ವಾಮಿ
ನಾನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎನ್ನುವುದು ಊಹಾಪೋಹ ಅಷ್ಟೇ. ಕಳೆದ ಬಾರಿ ಪಕ್ಷೇತರರವಾಗಿ ನಿಲ್ಲಿಎಂದು ಅಭಿಮಾನಿಗಳು ಹೇಳಿದ್ದರು, ಅದರಂತೆ ಮಂಡ್ಯದಲ್ಲಿ ಸ್ಪರ್ಧಿಸಿದ್ದೆ. ಮುಂದೆ ಯಾವುದೇ ನಿರ್ಧಾರ ಮಾಡುವುದಿದ್ದರೆ ಅವರನ್ನೇ ಕೇಳುತ್ತೇನೆ.
ಸಭೆಯಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಕುರಿತು ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ. ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲು ಬಯಸುವುದು ಸಹಜ. ಆದರೆ ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗದ ರೀತಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು ಸಾಧ್ಯವಾದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.