* ದಾವಣಗೆರೆ ಮಹಾನಗರ ಪಾಲಿಕೆ ಉಪಚುನಾವಣೆ
* ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ದಂಪತಿಗಳಿಗೆ ಭರ್ಜರಿ ಗೆಲುವು
* 24 ಮತ್ತು 37ನೇ ವಾರ್ಡ್‌ಗಳಿಗೆ ಉಪ ಚುನಾವಣೆ ನಡೆದಿತ್ತು
ದಾವಣಗೆರೆ, (ಮೇ.22): ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆಯ 24 ಮತ್ತು 37ನೇ ವಾರ್ಡ್‌ಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದ್ದಾರೆ.
ರೌಡಿ ಶೀಟರ್ ಆಗಿರೋ ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತಾ ಶ್ರೀನಿವಾಸ್ ಜಯಗಳಿಸಿದ್ದಾರೆ. ಈ ಮೂಲಕ ಜೆ.ಎನ್. ಶ್ರೀನಿವಾಸ್ ಸತತ ಮೂರನೇ ಬಾರಿಗೆ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಶ್ವೇತಾ ಶ್ರೀನಿವಾಸ್ ಸತತ ಎರಡನೇ ಬಾರಿಗೆ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾರೆ.
ಶ್ರೀನಿವಾಸ್ ದಂಪತಿಗಳು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು ಇದರಿಂದ ಎರಡು ವಾರ್ಡ್ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿತ್ತು. ಬಿಜೆಪಿ ಮತ್ತು ಕಾಂಗ್ರೆಸಿನ ಪಾಲಿಗೆ ಅತ್ಯಂತ ಮಹತ್ವ ಮತ್ತು ಪ್ರತಿಷ್ಠೆಯಾಗಿತ್ತು. ಅಂತಿಮವಾಗಿ ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಎರಡು ವಾರ್ಡ್‌ಗಳನ್ನು ಆಡಳಿತಾರೂಢ ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿದೆ.
Davanagere ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಬೈರತಿ ಬಸವರಾಜ್
28ನೇ ವಾರ್ಡ್‌ನ ಭಗತ್‌ಸಿಂಗ್ ನಗರದಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್ ಕಾಂಗ್ರೆಸ್‌ನ ಹುಲ್ಮನಿ ಗಣೇಶ್ ವಿರುದ್ಧ 681 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಜೆ.ಎನ್. ಶ್ರೀನಿವಾಸ್ 2565 ಮತಗಳ ಪಡೆದರೆ, ಕಾಂಗ್ರೆಸ್‌ನ ಹುಲ್ಮನೆ ಗಣೇಶ್ 1884 ಮತಗಳ ಗಳಿಸುವ ಮೂಲಕ ಸೋಲು ಅನುಭವಿಸಿದ್ದಾರೆ.
ಕಾಂಗ್ರೆಸ್ ಭಾರೀ ನಿರೀಕ್ಷೆ ಹೊಂದಿದ್ದ 37ನೇ ವಾರ್ಡ್‌ನಲ್ಲಿ ಸೋತಿದೆ. ಇಲ್ಲಿ ನಡೆದ ನೇರ ಪೈಪೋಟಿಯಲ್ಲಿ ಬಿಜೆಪಿಯ ಶ್ವೇತಾ ಶ್ರೀನಿವಾಸ್ ಕಾಂಗ್ರೆಸ್‌ನ ರೇಖಾರಾಣಿ ವಿರುದ್ಧ 793 ಮತಗಳಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಶ್ವೇತಾ ಶ್ರೀನಿವಾಸ್ 2096 ಮತಗಳು ಪಡೆದಿದ್ದಾರೆ. ರೇಖಾರಾಣಿ 1303 ಮತಗಳ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಜೆ.ಎನ್. ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗುವ ಮೂಲಕ ಸತತ ಎರಡನೇ ಬಾರಿಗೆ ನಗರಪಾಲಿಕೆ ಪ್ರವೇಶಿಸುವಲ್ಲಿ ದಂಪತಿ ಯಶಸ್ವಿಯಾಗಿದ್ದಾರೆ.
ಬಲ್ನಾಡು ಗ್ರಾ.ಪಂ.ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಜಯ
ಪುತ್ತೂರು: ಬಲ್ನಾಡು ಗ್ರಾ.ಪಂ. ವಾರ್ಡ್-1ರ ಸದಸ್ಯೆ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶ ರವಿವಾರ ಪ್ರಕಟವಾಗಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಹಿಂದುಳಿದ ವರ್ಗ `ಎ’ ಮಹಿಳಾ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಉಮಾವತಿ ಎಸ್. ಅಟ್ಟಾರು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ವಿನಯ ಬೆಳೆಯೂರುಕಟ್ಟೆ ಸ್ಪರ್ಧಿಸಿದ್ದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಅವರು ತಮ್ಮ ಪ್ರತಿಸ್ಪರ್ದಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಉಮಾವತಿ ಅವರ ವಿರುದ್ಧ 265 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಚಲಾಯಿತ ಒಟ್ಟು 903 ಮತಗಳಲ್ಲಿ ವಿನಯ ಬೆಳಿಯೂರುಕಟ್ಟೆ 579, ಉಮಾವತಿ 314 ಮತ ಪಡೆದರು. 9 ಮತಗಳು ತಿರಸ್ಕೃತ ಗೊಂಡಿವೆ.