ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಅವರ 'ಸಿದ್ದರಾಮುಲ್ಲಾ ಖಾನ್' ಹೇಳಿಕೆಯ ವಿರೋಧಿಸಿ ಕಾಂಗ್ರೆಸ್‌ನಿಂದ ಸಿ.ಟಿ. ರವಿ ಅವರ ಮನೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿತ್ತು.ಈಗ ಬಿಜೆಪಿ ರಾಜ್ಯ ಘಟಕ ಮತ್ತೊಮ್ಮೆ ಸಿದ್ರಾಮುಲ್ಲಾ ಖಾನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದೆ.
ಬೆಂಗಳೂರು (ಡಿ.5): ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಅವರ 'ಸಿದ್ದರಾಮುಲ್ಲಾ ಖಾನ್' ಹೇಳಿಕೆಯ ವಿರೋಧಿಸಿ ಕಾಂಗ್ರೆಸ್‌ನಿಂದ ಸಿ.ಟಿ. ರವಿ ಅವರ ಮನೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿತ್ತು.ಈಗ ಬಿಜೆಪಿ ರಾಜ್ಯ ಘಟಕ ಮತ್ತೊಮ್ಮೆ ಸಿದ್ರಾಮುಲ್ಲಾ ಖಾನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದೆ.
ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದು ಹೇಳಿಕೆ ನೀಡಿದ್ದರ ಕುರಿತು ಕ್ಷಮೆಯಾಚಿಸಬೇಕು. ಇಲ್ಲವೆಂದರೆ ಸಿ.ಟಿ. ರವಿ ಅವರ ಮನೆಯನ್ನು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ. ರವಿ ಅವರು ಸೌಹಾರ್ಧಯುತವಾಗಿ ಕಾಂಗ್ರೆಸ್ಸಿಗರು ಬಂದರೆ ಅವರನ್ನು ಸ್ವಾಗತಿಸುತ್ತೇವೆ. ಆದರೆ, ದುರುದ್ದೇಶದಿಂದಲ ಬಂದಲ್ಲಿ ಅವರಿಗೆ ಅದೇ ರೀತಿಯಲ್ಲಿ ತಿರುಗೇಟು ನೀಡಲಾಗುತ್ತದೆ ಎಂದು ತಿಳಿಸಿದ್ದರು. ಆದರೂ, ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಅವರ ಮನೆಯ ಮುಂದೆಪ್ರತಿಭಟನೆ ಮಾಡಿದ್ದರು. ಆದರೂ ಹೇಳಿಕೆ ಕುರಿತು ಯಾವುದೇ ಕ್ಷಮೆ ಅಥವಾ ವಾಪಸ್ ಪಡೆಯದೇ ಅದನ್ನೇ ಸಮರ್ಥನೆ ಮಾಡಿಕೊಂಡಿದ್ದರು.ಈಗ ಪುನಃ ರಾಜ್ಯ ಬಿಜೆಪಿ ಕೂಡ ಸಿ.ಟಿ. ರವಿ ಅವರ ಸಿದ್ರಾಮುಲ್ಲಾ ಖಾನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡು ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಸಿದ್ರಾಮುಲ್ಲಾ ಖಾನ್ ಎಂಬ ಬಿಜೆಪಿಗರ ಹೇಳಿಕೆಗೆ ತೀವ್ರ ಆಕ್ಷೇಪ
ಶಾಂತಿಯ ತೋಟಕ್ಕೆ ಟಿಪ್ಪುವನ್ನು ನುಗ್ಗಿಸಿದ ಸಿದ್ದರಾಮಯ್ಯ: ಕನ್ನಡಿಗರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯ ಅವರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು ಮತ್ತು ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ. ಒಂದು ಕ್ಷಣವೂ ವಿವೇಚಿಸದೆ ತಲಾಖ್ ಎಂದು ಹೇಳುವ ಮೂಲಕ ಮಹಿಳೆಯರ ಬದುಕು ಬರ್ಬಾದ್ ಮಾಡುವ ಮನಸ್ಥಿತಿ ಇರುವವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಕೂಡ ಸಿದ್ದರಾಮಯ್ಯ ಎಂದು ಟೀಕೆ ಮಾಡಲಾಗಿದೆ.
ಕನ್ನಡಿಗರು ರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು.
ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?
1/8
ಸೆಕ್ಯೂಲರಿಸಂ ಹೆಸರಲ್ಲಿ ತುಷ್ಟೀಕರಣ: ಸಿದ್ದರಾಮಯ್ಯ ಅವರು ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದರು. ಇಂಥವರನ್ನು 'ಸಿದ್ರಾಮುಲ್ಲಾ ಖಾನ್' ಎನ್ನದೆ ಮತ್ತೇನೆಂದು ಕರೆದಾರು? ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿ ತಂದರು. ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಪ್ರಶ್ನಿಸಲಾಗಿದೆ.
ಸಿದ್ರಾಮುಲ್ಲಾಖಾನ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಸಿದ್ದು ವಿರುದ್ಧ ಮತ್ತೆ ವಾಗ್ದಾಳಿ
ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಅಸಹನೆ ವ್ಯಕ್ತ: ಟಿಪ್ಪು ಎಕ್ಸ್‌ಪ್ರೆಸ್ ಎಂಬ ಹೆಸರನ್ನು, ನಾಡಿನ ಜನ ಇಂದಿಗೂ ಸ್ಮರಿಸುವ-ಆರಾಧಿಸುವ 'ಒಡೆಯರ್' ಎಕ್ಸ್‌ಪ್ರೆಸ್ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ 'ಮೀರ್ ಸಾದಿಕ್' ಎನ್ನಬಹುದೆ? ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್ ಬ್ರಾಂಡ್ ಮಾಡಿರುವುದು ಎಂದು ಟ್ವೀಟ್‌ನಲ್ಲಿ ತಿಳಿಸಿದೆ.
ಉಗ್ರ ಕೃತ್ಯ ಕರಾಳ ರಾತ್ರಿ ಪಾಠ ಕೈಬಿಟ್ಟವರು: ದೇಶದಲ್ಲಿ ನಡೆದ ಕರಾಳ ಘಟನೆ 26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್‌ರವರ ವೀರಗಾಥೆಯುಳ್ಳ 'ಕರಾಳ ರಾತ್ರಿ' ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ ಅವರ ನಡವಳಿಗೆ ಹೀಗಿರುವಾಗ "ಸಿದ್ರಾಮುಲ್ಲಾ ಖಾನ್' ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ? ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಸರಣಿ ಟ್ವೀಟ್ ಮೂಲಕ ಸಿದ್ರಾಮುಲ್ಲಾ ಖಾನ್ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.
ಸಿದ್ರಾಮುಲ್ಲಾಖಾನ್, ಕೊತ್ವಾಲ್ ಜಪ ನಿಲ್ಲಿಸದಿದ್ರೆ ಸ್ಥಿತಿ ವಿಕೋಪಕ್ಕೆ: ಎಂ.ಬಿ.ಪಾಟೀಲ್
ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ತಿರುಗೇಟು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮುಲ್ಲಾ ಖಾನ್ ಆದರೆ ಯಡಿಯೂರಪ್ಪ ಮತ್ತು ಜಗದೀಶ್ ಶಟ್ಟರ್ ಯಾವ ಖಾನ್? ಇವರು ಕೂಡ ತಲೆ ಮೇಲೆ ಟಿಪ್ಪು ಪೇಟ ಹಾಕಿಕೊಂಡಿದ್ದರಲ್ಲವೇ? ಹಾಗದರೆ ಇವರನ್ನು ಯಾವ ಖಾನ್? ಎಂದು ಕರೆಯಬೇಕು. ಯಡಿಯೂರಪ್ಪ ಏನು ಯೂಸುಫ್ ಖಾನ್ ಆಗಬೇಕಲ್ವಾ? ಜಗದೀಶ್ ಶೆಟ್ಟರ್ ಯಾವ ಖಾನ್? ಎಂದು ವ್ಯಂಗ್ಯ ಮಾಡಿದರು. ಸಿದ್ದರಾಮಯ್ಯ ಅವರಿಗೆ ಅವರ ತಂದೆ ತಾಯಿ ನಾಮಕರಣ ಮಾಡಿದ್ದಾರೆ. ನಾಮಕರಣ ಮಾಡುವುದಕ್ಕೆ ಪುರೋಹಿತರು ಬರುತ್ತಾರೆ. ಆದರೆ, ಸಿದ್ದರಾಮಯ್ಯ ನಾಮಕರಣ ಮಾಡೋಕೆ ಸಿ.ಟಿ. ರವಿ ಯಾರು? ಮೊದಲು ಇವರ ಹೆಸರು ಏನೆನ್ನುವುದು ತಿಳಿದುಕೊಳ್ಳಬೇಕು. ಚಿಕ್ಕಮಗಳೂರಿನಲ್ಲಿ ಇವರು ಏನು? ಅನ್ನೊದು ಎಲ್ಲರಿಗೂ ಗೊತ್ತಿದೆ. ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು, ಹೊರತು ಹೆಸರುಗಳನ್ನು ಬೇರೆ ಬೇರೆ ಇಡೋದು ತಪ್ಪು. ಬೇರೆಯವರಿಗೆ ಹೆಸರಿಡೋದು ಬಿಜೆಪಿ ಸಂಪ್ರದಾಯ ಆಗಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ಬಂದಾಗ ಸಿದ್ದರಾಮಯ್ಯ ಒಂದು ಟೈಟಲ್ ಕೊಟ್ಟಿದ್ದರು. ಈಗ ಈ ಕೆಲಸವನ್ನು ಅವರ ಚೇಲಾಗಳು ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.