
ಯಾದಗಿರಿ (ಸೆ.18): ‘ವೀರಶೈವ ಲಿಂಗಾಯತ ಸಮುದಾಯದ ಕೆಲವು ಹಿರಿಯ ಮುಖಂಡರು ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಸೇರಿದ್ದೇವೆ. ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
‘ವೀರಶೈವ ಲಿಂಗಾಯತ ಸಮುದಾಯದ ಕೆಲವು ಹಿರಿಯ ಮುಖಂಡರು ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಸೇರಿದ್ದೇವೆ. ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗಿದೆ. ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ವೀರಶೈವ ಮಹಾಸಭಾ ಇರಬಹುದು, ಪಂಚಪೀಠಾಧೀಶರು, ಗುರುವಿರಕ್ತರು ಇರಬಹುದು. ಎಲ್ಲರೂ ಸೇರಿ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು ಅಂತ ನಿರ್ಣಯಕ್ಕೆ ಬಂದಿದ್ದೇವೆ. ನಾಳೆ ಎಲ್ಲರನ್ನೂ ಭೇಟಿ ಆಗಿ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ’ ಎಂದರು. ‘ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಅಧಿಕಾರ ಇಲ್ಲದಿದ್ದರೂ ಸಹ, ಇದಕ್ಕೆ ಮುಂದಾಗಿರುವುದರ ಹಿಂದೆ ಕುತಂತ್ರ ಅಡಗಿದೆ’ ಎಂದು ಅವರು ಕಿಡಿಕಾರಿದರು.
ಸದಾ ಹೋರಾಟಗಳ ಮೂಲಕ ಸಾಮಾಜಿಕ, ಶೈಕ್ಷಣಿಕವಾಗಿ ಯಾದಗಿರಿ ಜಿಲ್ಲೆ ಅಭಿವೃದ್ಧಿಗೆ ಹೊಸ ಕಾಯಕಲ್ಪ ನೀಡಿ, ರಾಜಕೀಯವಾಗಿ ಅಪಾರ ಸೇವೆ ಮಾಡಿದ್ದ ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳರ ಪುತ್ರ ಮಹೇಶರಡ್ಡಿ ಮುದ್ನಾಳ್ ಅವರೊಂದಿಗೆ ಮುಂಬರುವ ದಿನಗಳಲ್ಲಿ ನಾವೂ-ನೀವೂ ಜೊತೆಗೂಡಿ ಶಕ್ತಿ ತುಂಬಿ, ಅವರ ಮನೆತನ ರಾಜಕೀಯ, ಸಾಮಾಜಿಕ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡುವುದು ಅವಶ್ಯಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಮತ ವ್ಯಕ್ತಪಡಿಸಿದರು.
ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ್ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ, ನಗರದ ಮುದ್ನಾಳ್ ಲೇ-ಔಟ್‌ನಲ್ಲಿ ಲಿಂಗೈಕ್ಯ ವೆಂಕಟರಡ್ಡಿ ಮುದ್ನಾಳ್ ಕುಟಂಬ ಹಾಗೂ ಅಭಿಮಾನಿಗಳು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯ ಕುಟುಂಬದಲ್ಲಿ ಜನಿಸಿದ ಮಾಜಿ ಶಾಸಕ ಲಿಂ. ವೆಂಕಟರಡ್ಡಿ ಮುದ್ನಾಳ ಅವರು ತಮ್ಮ ಜೀವಿತಾವಧಿಯಲ್ಲಿ ಸದಾ ಹೋರಾಟ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಪಾರ ಸೇವೆ ಮಾಡುವ ಮೂಲಕ ಗಿರಿ ಜಿಲ್ಲೆಗೆ ಹೊಸ ಕಾಯಕಲ್ಪ ನೀಡಿ, ಎಲ್ಲರ ಮನಸ್ಸಿನಲ್ಲಿ ಉಳಿದಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.