
ಬೆಂಗಳೂರು(ಡಿ.27): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡದ ಮೊದಲ ಸಭೆ ಬುಧವಾರ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆ ನಡೆಯಲಿದೆ. ಮೊದಲ ಹಂತವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ಮತ್ತು ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವ ಸಭೆ ನಡೆಯಲಿದೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪಕ್ಷದ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲಾ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದ್ದಾಗಿದೆ ಎಂದರು.
ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಯಾರ ಮುಲಾಜಿಗೂ ಒಳಗಾಗಬಾರದು: ಎಚ್. ವಿಶ್ವನಾಥ್
ಗುರುವಾರ ಪ್ರಮುಖರ ಸಭೆ:
ಅಂತೆಯೆ ರಾಜ್ಯಾಧ್ಯಕ್ಷರು ಗುರುವಾರ ರಾಜ್ಯ ಪ್ರಮುಖರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ. ಅವರ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಎದುರಿಸುವುದರ ಕುರಿತು ಎಲ್ಲರ ಸಲಹೆ ಪಡೆಯಲಿದ್ದಾರೆ. ಅಂತೆಯೇ ಈ ಸಭೆಯಲ್ಲಿ ರಾಜ್ಯದಲ್ಲಿ ತಳಮಟ್ಟಕ್ಕೆ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ರಾಜೀವ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.