ಮತ್ತೋರ್ವ ಬಿಜೆಪಿ ನಾಯಕ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

By Suvarna NewsFirst Published Dec 19, 2020, 7:28 PM IST
Highlights

ಈಗಾಗಲೇ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಮೂರು ಜನಪ್ರತಿನಿಧಿಗಳಿದ್ದಾರೆ. ಇದರ ಮಧ್ಯೆಯೂ ಮತ್ತೋರ್ವ ಶಾಸಕರನ್ನ ಯಡಿಯೂರಪ್ಪ ತಮ್ಮ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ.

ಬೆಂಗಳೂರು, (ಡಿ.19): ಎಂ.ಪಿ. ರೇಣುಕಾಚಾರ್ಯ, ಎಸ್.ಆರ್.ವಿಶ್ವನಾಥ್, ಶಂಕರಗೌಡ ಹಾಗೂ ಎನ್‌.ಆರ್.ಸಂತೋಷ್ ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಗಳಾಗಿದ್ದಾರೆ.

ಇದೀಗ  ಎಸ್.ಆರ್.ವಿಶ್ವನಾಥ್ ಅವರನ್ನ ಬಿಡಿಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದರಿಂದ ಇವರು ಸ್ಥಾನಕ್ಕೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರನ್ನ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಯಡಿಯೂರಪ್ಪ ಕೊಟ್ರು ಬಂಪರ್: ನಿಗಮ ಮಂಡಳಿ ಅಧ್ಯಕ್ಷರಿಗೆ ಜಾಕ್​ಪಾಟ್ 

ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜ್ಯ ಶಿಷ್ಟಾಚಾರ) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ-1 ಮೊಹಮ್ಮದ ನಯೀಮ್ ಮೊಮಿನ್ ಅವರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರಾದಂತ ಡಿಎನ್ ಜೀವರಾಜ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

click me!