ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ರಾಜ್ಯಪಾಲರು

Published : Jul 24, 2022, 07:52 PM ISTUpdated : Jul 25, 2022, 08:06 AM IST
ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ರಾಜ್ಯಪಾಲರು

ಸಾರಾಂಶ

ಆರ್‌ಎನ್‌ಎಸ್ ವಿದ್ಯಾನಿಕೇತನ ಕ್ಯಾಂಪಸ್-2 ಎರಡನೆಯ ಲಾಂಛನ ಹಾಗೂ ಫಲಕವನ್ನು ಅನಾವರಣ ಕಾರ್ಯಕ್ರಮದಲ್ಲಿ ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ  ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭೇಟಿಯಾಗಿದ್ದಾರೆ. 

ಬೆಂಗಳೂರು(ಜು.24): ಖಾಸಗಿ ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭೇಟಿಯಾಗಿದ್ದಾರೆ. ಆರ್ ಎನ್ ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮಕ್ಕೆ ಹಾಜರಾದ ಸಿಟಿ ರವಿ, ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿ ಗಮನಸೆಳೆದಿದ್ದಾರೆ. ಆರ್‌ಎನ್‌ಎಸ್ ವಿದ್ಯಾನಿಕೇತನ ಕ್ಯಾಂಪಸ್-2 ಎರಡನೆಯ ಲಾಂಛನ ಹಾಗೂ ಫಲಕವನ್ನು ಅನಾವರಣ ಕಾರ್ಯಕ್ರಮದಲ್ಲಿ ಸಿಟಿ ರವಿ ಹಾಗೂ ಗೆಹ್ಲೋಟ್ ಭೇಟಿಯಾಗಿದ್ದಾರೆ.   ಕಾರ್ಯಕ್ರಮದಲ್ಲಿ ಮಾತನಾಡಿದ ಗೆಹ್ಲೋಟ್,  ಕರ್ನಾಟಕ ರಾಜ್ಯವು ಗುಣಮಟ್ಟದ, ತಾಂತ್ರಿಕ, ಉದ್ಯೋಗ ಆಧಾರಿತ ಶಿಕ್ಷಣವನ್ನು ನೀಡುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಮತ್ತು ಬೆಂಗಳೂರು ಪ್ರಸ್ತುತ ಶಿಕ್ಷಣದ ಕೇಂದ್ರವಾಗಿದೆ ಎಂದು ಎಂದಿದ್ದಾರೆ. ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಆರ್ ಎನ್ ಎಸ್ ಶಿಕ್ಷಣ ಸಂಸ್ಥೆ, ಸುಮಾರು 9 ಎಕರೆ ಪ್ರದೇಶದಲ್ಲಿ ಮಾಲಿನ್ಯ ಮುಕ್ತ ಪರಿಸರದಲ್ಲಿ ಅತ್ಯಾಧುನಿಕ ಸಂಪೂರ್ಣ ಸುಸಜ್ಜಿತ ಕ್ಯಾಂಪಸ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸ, ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಇದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿಯೂ ಸದೃಢರಾಗುತ್ತೀರಿ. ನೀವು ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದೀರಿ ಎಂದು ಕರೆ ನೀಡಿದರು. 

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟಪ್ ಮತ್ತು ಸ್ಟ್ಯಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳನ್ನು ಬಳಸಿಕೊಂಡು ನೀವು ಶ್ರೇಷ್ಠ ಭಾರತ, ನವ ಭಾರತ- ನವ ಕರ್ನಾಟಕ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಬಹುದು ಮತ್ತು ಇವುಗಳ ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಸ್ವಾತಂತ್ರ್ಯದ ಪಯಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ ಎಂದರು. 

ಕಾಂಗ್ರೆಸ್ಸಿಗರು ಪ್ರಾಮಾಣಿಕರಾಗಿದ್ದರೆ ಇ.ಡಿ.ಗೇಕೆ ಹೆದರಬೇಕು?: ಸಿ.ಟಿ.ರವಿ

ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದಲ್ಲಿನ ಅಸಮಾನ ಕುಸಿತದಿಂದಾಗಿ ಇಂದು ನಾವು ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯು ಪರಿಸರ ಸಂರಕ್ಷಣೆಯ ಬಗ್ಗೆ ಯೋಚಿಸುವಂತೆ ಒತ್ತಾಯಿಸಿದೆ. ಪ್ರಕೃತಿಯ ಬಗ್ಗೆ ಪ್ರೀತಿ ಗೌರವ, ಸರಳ ಜೀವನ ವಿಧಾನ ಮತ್ತು ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು ಎಂದು ಹೇಳಿದರು. 

ರಾಷ್ಟ್ರದ ಹೊಸ ಶಿಕ್ಷಣ ನೀತಿಯು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುತ್ತದೆ ಮತ್ತು ಅಂತಹ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ, ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಮಾನವಕುಲಕ್ಕೆ ಪ್ರಯೋಜನವನ್ನು ನೀಡುತ್ತದೆ, ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಮತ್ತು ಕ್ರೀಡೆಗೆ ಆದ್ಯತೆ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಮನವಿ ಮಾಡಿದರು. 

 

ಹಿಂದೂ ಸಮಾಜಕ್ಕೆ ಸಿದ್ದು ಕೊಡಲಿ ಕಾವು ಆಗದಿರಲಿ: ಸಿ.ಟಿ.ರವಿ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪರಮ ಪೂಜ್ಯ, ಶ್ರೀ ಶ್ರೀ ಶ್ರೀ ಸುಭುದೇಂದ್ರ ಸ್ವಾಮೀಜಿ, ಸಚಿವರಾದ ಸಿ ಟಿ ರವಿ, ಜಿತೇಂದ್ರ ಗೆಹ್ಲೋಟ್, ಬಂಟ್ಸ್ ಸಂಘದ ಆರ್ ಎನ್ ಎಸ್ ವಿದ್ಯಾನಿಕೇತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಕೆ. ಪ್ರಕಾಶ್ ಶೆಟ್ಟಿ, ಕರ್ನಾಟಕದ ಮಾಜಿ ಲೋಕಾಯುಕ್ತ, ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಮಿಸ್ ಇಂಡಿಯಾ 2022 ಸಿನಿ ಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ