ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಮಿಷ: ಸಿಎಂ ಬಹಿರಂಗ ಆರೋಪ

By Ravi Janekal  |  First Published Mar 2, 2024, 6:07 AM IST

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರುಪಾಯಿ ಆಫರ್ ಮಾಡಿದೆ. ಆದರೆ, ಕಾಂಗ್ರೆಸ್‌ ಶಾಸಕರ್‍ಯಾರೂ ಇದಕ್ಕೆ ಬಗ್ಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


 ಮೈಸೂರು (ಮಾ.2): ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರುಪಾಯಿ ಆಫರ್ ಮಾಡಿದೆ. ಆದರೆ, ಕಾಂಗ್ರೆಸ್‌ ಶಾಸಕರ್‍ಯಾರೂ ಇದಕ್ಕೆ ಬಗ್ಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಹೇಳಿದರು.

Latest Videos

undefined

ಬಿಜೆಪಿಯು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು.

ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು. 

ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು 'ನಮ್ಮ ಬ್ರದರ್ಸ್' ಅಂದಿದ್ದ ಡಿಕೆಶಿ, ಈಗ ಬಾಂಬರ್‌ಗೆ ಆಂಕಲ್ ಅಂತಾರಾ? ಬಿಜೆಪಿ ಕಿಡಿ

ರಾಜ್ಯ ಸರ್ಕಾರ ಉರುಳಿಸಲೆತ್ನ 

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ.
- ಸಿದ್ದರಾಮಯ್ಯ, ಮುಖ್ಯಮಂತ್ರಿ

click me!