ವಿದ್ಯುತ್‌ ದರ ಹೆಚ್ಚಳಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ: ಶಾಸಕ ತನ್ವೀರ್‌ ಸೇಠ್‌

By Kannadaprabha News  |  First Published Jun 18, 2023, 10:02 PM IST

ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಕಾಂಗ್ರೆಸ್‌ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್‌ ಆರೋಪಿಸಿದರು.


ಮೈಸೂರು (ಜೂ.18): ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಕಾಂಗ್ರೆಸ್‌ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್‌ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್‌ ದರ ಹೆಚ್ಚಳಕ್ಕೆ ಕೆಇಆರ್‌ಸಿ ಮಾಡಿದ್ದ ಶಿಫಾರಸಿಗೆ ಈ ಹಿಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬಿಜೆಪಿಯರಿಗೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರಿಂದ ವಿದ್ಯುತ್‌ ದರ ಹೆಚ್ಚಳ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಮೇ 12 ರಂದು ಪ್ರಕಟವಾಗಿದೆ. 

ಮೇ 13 ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗ ಶಾಕ್‌ ಕೊಡುವ ಕೆಲಸ ಮಾಡಿದ್ದಾರೆ ಎಂದರು. ಹೀಗಾಗಿ, ನಾನು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. 5 ಗ್ಯಾರಂಟಿ ಯೋಜನೆ ಜಾರಿಯ ಜೊತೆಗೆ ವಿದ್ಯುತ್‌ ದರ ಏರಿಸಿದರೆ ಜನರಿಗೆ ತೊಂದರೆ ಆಗಲಿದೆ. ಕಾಂಗ್ರೆಸ್‌ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದೇನೆ. ವಿದ್ಯುತ್‌ ದರ ಹೆಚ್ಚಳದಲ್ಲಿ ಲೋಪವಾಗಿದೆ ಎಂದು ತಿಳಿಸಿದ್ದೇನೆ. ವಿದ್ಯುತ್‌ ದರ ಹೆಚ್ಚಳವನ್ನು ಪುನರ್‌ ಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

Latest Videos

undefined

ಇಂದಿರಾ ಕ್ಯಾಂಟೀನ್‌ನಲ್ಲಿ ಕಬಾಬ್‌ ತಿನ್ನಲು ಅವಕಾಶ: ಸಚಿವ ಎಚ್‌.ಸಿ.ಮಹದೇವಪ್ಪ

ಬರಗೂರು ಸಮಿತಿ ಶಿಫಾರಸು ಅಳವಡಿಕೆ: ಪಠ್ಯಪುಸ್ತಕ ಪರಿಷ್ಕರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಮಕ್ಕಳ ವಯೋಮಾನಕ್ಕೆ ತಕ್ಕಂತೆ ಸ್ವೀಕರಿಸಲು ಸಾಧ್ಯವಿರುವ ಶಿಕ್ಷಣ ಕೊಡಬೇಕು. ನಾವು ಕೊಡುವ ಶಿಕ್ಷಣದಿಂದ ಮಕ್ಕಳ ಜೀವನಶೈಲಿ ಬದಲಾಗಬೇಕು. ಬಿಜೆಪಿ ಸರ್ಕಾರ ಬಂದಾಗ ಪಠ್ಯದಲ್ಲಿ ಬೇರೆ ವಿಷಯ- ವಿಷ ಎರಡನ್ನೂ ಕೊಟ್ಟಿದ್ದರು ಎಂದರು. 2016ರಲ್ಲಿ ನಾನು ಸಚಿವನಾಗಿದ್ದಾಗ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಮಾಡಿದ್ದ ಶಿಫಾರಸಿನ ಅನ್ವಯ 1 ರಿಂದ 10ನೇ ತರಗತಿಯವರೆಗೂ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಿದೆವು. ಈಗಲೂ ಬರಗೂರು ರಾಮಚಂದ್ರಪ್ಪ ಸಮಿತಿ ಶಿಫಾರಸು ಮಾಡಿದ್ದ ಪಠ್ಯಕ್ರಮವನ್ನೇ ಅಳವಡಿಸಲಾಗಿದೆ ಎಂದು ಅವರು ಹೇಳಿದರು.

ಪ್ರತಾಪ್‌ ಸಿಂಹ ಹೇಳಿಕೆಗೆ ತಿರುಗೇಟು: ಸಂಸದ ಪ್ರತಾಪ್‌ ಸಿಂಹ ಅಡ್ಜೆಸ್ಟ್‌ಮೆಂಟ್‌ ಪಾಲಿಟಿಕ್ಸ್‌ ಬಗ್ಗೆ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವೀರ್‌ ಸೇಠ್‌ ಅವರು, ಅಡ್ಜೆಸ್ಟ್‌ಮೆಂಟ್‌ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಅಡ್ಜೆಸ್ಟ್‌ಮೆಂಟ್‌ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೊದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು. ಗೃಹಲಕ್ಷ್ಮಿ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ 2- 3 ಹೆಂಡತಿಯರಿರುತ್ತಾರೆ, ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರ್ತಿಸುತ್ತೀರಿ ಎಂದು ಸಂಸದ ಪ್ರತಾಪ್‌ ಸಿಂಹ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ತನ್ವೀರ್‌ ಸೇಠ್‌ ಅವರು, ಪ್ರತಾಪ್‌ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಕುಟುಕಿದರು.

ಜು.1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡಲು ತೀರ್ಮಾನ: ಡಿ.ಕೆ.ಶಿವಕುಮಾರ್‌

ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ನಿರಾಸೆಯಾಗಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವ ಖುಷಿಯಿದೆ. ಮನುಷ್ಯನ ಆಸೆಗೆ ಕೊನೆಯಿಲ್ಲ. 34ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ.
- ತನ್ವೀರ್‌ ಸೇಠ್‌, ಶಾಸಕರು, ನರಸಿಂಹರಾಜ ಕ್ಷೇತ್ರ

click me!