ಕೇಂದ್ರದ ಒತ್ತಡಕ್ಕೆ ಮಣಿದು ರಾಜ್ಯಪಾಲರಿಂದ ಸಿಎಂ ವಿರುದ್ಧ ಪ್ರಾಸಿಕ್ಯೂಷನ್; ಶಾಸಕ ಕೋನರೆಡ್ಡಿ

By Sathish Kumar KH  |  First Published Aug 18, 2024, 6:22 PM IST

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಎನ್. ಎಚ್. ಕೋನರೆಡ್ಡಿ ಆರೋಪಿಸಿದ್ದಾರೆ. 


ಧಾರವಾಡ (ಆ.18): ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಎನ್. ಎಚ್. ಕೋನರೆಡ್ಡಿ ತಿಳಿಸಿದರು. 

ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ತಜ್ಞರು ಇಂತಹ ಅವಶ್ಯಕತೆ ಇರಲಿಲ್ಲ ಅಂತಾ ಹೇಳಿದ್ದಾರೆ. ಕೇಜ್ರಿವಾಲ್, ಇತರರ ಪ್ರಕರಣ ಪ್ರಸ್ತಾಪ ಮಾಡಿದ್ದಾರೆ. ಆದರೆ ಚುನಾಯಿತ ಸರ್ಕಾರವನ್ನು ಹೀಗೆ ತೆಗೆಯಲು ಆಗುವುದಿಲ್ಲ, ಎಸ್.ಆರ್. ಬೊಮ್ಮಾಯಿ ಪ್ರಕರಣದ ತೀರ್ಪು ಇದೆ. ಬಿಜೆಪಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದಿತ್ತು. ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಕೊಡುವ ಮನಸ್ಸಿರಲಿಲ್ಲ, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಅನುಮತಿ ಕೊಟ್ಟಿರಬಹುದು. ನಾವು ಈ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

Latest Videos

undefined

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪರ ಬಿಕೆ ಹರಿಪ್ರಸಾದ್ ಬ್ಯಾಟಿಂಗ್!

ಮೈಸೂರು ಜನಾಂದೋಲದಲ್ಲಿ 136 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಿರ್ಣಯ ತೆಗೆದುಕೊಂಡಿದ್ದಾರೆ. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಒಂದು ನಿರ್ಣಯ ಪಾಸ್ ಮಾಡಿದ್ದಾರೆ. 9 ಸಂಸದರು, ಎಂಎಲ್‌ಸಿ, ರಾಜ್ಯಸಭಾ ಸದಸ್ಯರು ಪಕ್ಷದ ಹೈಕಮಾಂಡ್ ಸಹ ಇದಕ್ಕೆ ಒಪ್ಪಿದ್ದಾರೆ. ರಾಜ್ಯದ ಜನರೂ ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಭಾವನೆ ಹೊಂದಿದ್ದಾರೆ. ಹಿಂಬಾಗಿಲಿನಿಂದ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕ್ರಮಕ್ಕೆ ಪ್ರಯತ್ನಿಸಬೇಡಿ, ಹಾಗೇನಾದ್ರೂ ಮಾಡಿದ್ರೆ ಬಿಜೆಪಿ ಹೇಳಲು ಹೆಸರಿಲ್ಲದಂತೆ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. 

ಕರ್ನಾಟಕ ರಾಜ್ಯದ ಜನತೆಗೆ ಗ್ಯಾರಂಟಿ ಕೊಟ್ಟಿರುವ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಜನರು ದೇವರಂತೆ ಕಾಣುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಟ್ಟಿದ್ರೆ ಬಿಜೆಪಿ ಸತ್ಯಾನಾಶ ಆಗುತ್ತದೆ. ತಪ್ಪು ಇದ್ದರೆ ಹೇಳಲಿ..? ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ಶಕ್ತಿ ಯಾರಿಗೂ ಇಲ್ಲ, ಅಷ್ಟೊಂದು ಸರಿಯಾದ ಮಾರ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು, ರಾಜ್ಯಪಾಲರು ಈಗ ಯಾಕೆ ಅನುಮತಿ ಕೊಟ್ಟಿದ್ದಾರೆ. ಈ ಹಿಂದೇ ಅನೇಕರು ಅರ್ಜಿ ಸಲ್ಲಿಸಿದಾಗ ಅನುಮತಿ ಯಾಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. 

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ದೊಡ್ಡ ಷಡ್ಯಂತ್ರ: ಸಚಿವ ದಿನೇಶ್‌ ಗುಂಡೂರಾವ್‌

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲ್ಲು ಬಂಡೆಯಂತೆ ಹೋರಾಟ ಮಾಡುವುದಾಗಿ ಹೇಳಿದಾರೆ. ಆಗಸ್ಟ್. 19 ಕ್ಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ನಾವೆಲ್ಲ ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದರು.

click me!